17ರಂದು ಕಾಂಗ್ರೆಸ್‌ಯಿಂದ ಯೋಧರಿಗಾಗಿ ರಕ್ತದಾನ

Congress to donate blood for soldiers on 17th

ಗದಗ  15 : ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ‘ನಮಗಾಗಿ ಗಡಿಯಲ್ಲಿ ರಕ್ತ ಹರಿಸುವ ಯೋಧರಿಗಾಗಿ ನಾವು ಮಾಡೋಣ ರಕ್ತದಾನ’ ಘೋಷವಾಕ್ಯದಡಿ ಯೋಧರಿಗಾಗಿ ರಕ್ತದಾನ ಶಿಬಿರ ಮೇ 17ರ ಶನಿವಾರದಂದು ಬೆಳಗ್ಗೆ 9ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್‌. ಪಾಟೀಲ ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ಗಡಿಯಲ್ಲಿ ನಮ್ಮನ್ನು ಕಾಯಲು ಬಲಿದಾನಗೈಯುತ್ತಿರುವ ಭಾರತೀಯ ಸೇನೆ ಯೋಧರಿಗಾಗಿ ರಕ್ತದಾನ ಶಿಬಿರ ಏರಿ​‍್ಡಸಲಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರು, ಸದಸ್ಯರು, ನಗರಸಭೆ, ಪಟ್ಟಣ ಪಂಚಾಯ್ತಿ, ಪುರಸಭೆ ಅಧ್ಯಕ್ಷರು, ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್‌ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೃಷ್ಣಗೌಡ ಎಚ್‌. ಪಾಟೀಲ ಅವರು ಮನವಿ ಮಾಡಿದ್ದಾರೆ.