ಗದಗ 29: ಮೇ 1ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯ ಗಿರಿನಿಚಾಳ ಮೈದಾನದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಹಾಗೂ ಸಂವಿಧಾನ್ ಬಚಾವೋ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕಾನೂನು ಸಂಸದೀಯ ವ್ಯವಹಾರಗಳು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ.ಎಸ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ನಿಗಮ ಮಂಡಳಿ ಅಧ್ಯಕ್ಷರುಗಳು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ರಾಜ್ಯಾಧ್ಯಕ್ಷರು ಹಾಗೂ ಸಂಬಂಧಪಟ್ಟ ಜಿಲ್ಲೆಗಳ ಸ್ಥಳೀಯ ಮುಖಂಡರುಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಯ ಸಂಬಂಧಪಟ್ಟ ಸ್ಥಳೀಯ ಮುಖಂಡರುಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಗದಗ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರಾದ ಅಶೋಕ ಕೆ ಮಂದಾಲಿ ಅವರು ವಿನಂತಿಸಿದ್ದಾರೆ.