ಬೆಳಗಾವಿ, ಜುಲೈ 08: ಕೊಲೆ ಪ್ರಯತ್ನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ಕಾಕತಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದ್ದು, ಮೂವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.
ಕೊಲೆಗೆ ಯತ್ನಿಸಿದ 40 ವರ್ಷದ ಆರೋಪಿಯನ್ನು ನಿನ್ನೆ ಕಾಕತಿ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯ ಆದೇಶದ ಮೇರೆಗೆ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ಆರೋಪಿಗೆ ಇಂದು ಬೆಳಗ್ಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯ ಕೋವಿಡ್ ವಾಡರ್್ಗೆ ದಾಖಲಿಸಲಾಗಿದೆ.
ಆರೋಪಿಯನ್ನು ಬಂಧಿಸಿದ್ದ ಕಾಕತಿ ಠಾಣೆ ಪೊಲೀಸರಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಈತನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮೂವರು ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.