ಹುಬ್ಬಳ್ಳಿಯ ಇಬ್ಬರಲ್ಲಿ ಕೊರೊನಾ ಸೋಂಕು, ಪ್ರಕರಣದ ಸಂಖ್ಯೆ 9

ಹುಬ್ಬಳ್ಳಿ, ಏ.23,ನಗರದಲ್ಲಿ ಇಬ್ಬರು ಮಹಿಳೆಯರಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ .ಏ.13 ರಂದು ಸೋಂಕು ದೃಢಪಟ್ಟಿದ್ದ ಸೋಂಕಿತ 236 ರ ಸಂಪರ್ಕದಿಂದಾಗಿ  ಹುಬ್ಬಳ್ಳಿ ಮುಲ್ಲಾ ಓಣಿಯ 30 ವರ್ಷದ ಮಹಿಳೆ ಹಾಗೂ ಕೇಶ್ವಾಪುರದ ಆಜಾದ್ ಕಾಲನಿಯ 13 ವರ್ಷದ ಬಾಲಕಿಯೊಬ್ಬಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಇಬ್ಬರಿಗೂ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಇದು ಒಂಬತ್ತನೇ ಪ್ರಕರಣವಾಗಿದೆ.ಅವರಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಎಂಟು ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.