ಬೆಂಗಳೂರು, ಫೆ.12, ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಪಕ್ಷದಿಂದ ಬೆಂಬಲ ನೀಡುವ ಸಂಬಂಧ ವಿಪಕ್ಷ ಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುಪ್ತ ಸಭೆ ನಡೆಸಿರುವ ಬಗ್ಗೆ ವರದಿಯಾಗಿದೆ.ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಮುಖ ನಾಯಕರ ಜತೆ ಸಭೆ ಬಳಿಕ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಪರಸ್ಪರ ಚರ್ಚೆ ನಡೆಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಕೊಡುವ ಬಗ್ಗೆ ತಮ್ಮನ್ನು ಸಂಪರ್ಕಿಸದೆ ತಮ್ಮ ಗಮನಕ್ಕೂ ತಾರದೆ ಕೇವಲ ಜೆಡಿಎಸ್ ನಾಯಕರು ಹಾಗೂ ಪಕ್ಷದ ಡಿ.ಕೆ.ಶಿವಕುಮಾರ್ ಜತೆ ಮಾತ್ರವೇ ಚರ್ಚೆ ಮಾಡಿದ್ದಾರೆಂದು ಪರಸ್ಪರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಜೊತೆ ಚರ್ಚಿಸದೇ ನಿರ್ಧಾರ ತೆಗೆದುಕೊಂಡಿರುವುದರಿಂದ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುವುದು ಸರಿಯಲ್ಲ. ಒಂದು ವೇಳೆ ಬೆಂಬಲಿಸಿದರೆ ಮುಖಭಂಗ ಅನುಭವಿಸಬೇಕಾಗಿ ಬಂದು, ಅದು ಪಕ್ಷದ ಮೇಲೆ ಪರಿಣಾಮ ಬೀರಬಹುದೆಂದು ಎಂಬ ಚರ್ಚೆ ನಡೆದಿದೆ ಎನ್ನಲಾಗಿದೆ.ತಮಗೆ ಗೊತ್ತಿಲ್ಲದಂತೆಯೇ ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆಂದು ಕುಪಿತಗೊಂಡಿರುವ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡದಿದ್ದರೆ ಬಿಜೆಪಿಯ ಲಕ್ಷ್ಮಣ್ ಸವದಿಗೆ ಗೆಲುವು ಸುಲಭವಾಗಬಹುದು ಎನ್ನಲಾಗಿದೆ.