ನವದೆಹಲಿ, ಅ 15: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ವಿಶೇಷ ನ್ಯಾಯಾಲಯ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಈ ತಿಂಗಳ 25ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.
ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮತ್ತಷ್ಟು ವಿಚಾರಣೆ ಶಿವಕುಮಾರ್ ಆಗತ್ಯವಿರುವ ಹಿನ್ನಲೆಯಲ್ಲಿ ನ್ಯಾಯಾಂಗ ಬಂಧನವನ್ನು ಮುಂದುವರಿಸಬೇಕು ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯವನ್ನು ಕೋರಿತ್ತು.