ಭಾರತ ರತ್ನ ದಿ.ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ

Death anniversary of Bharat Ratna D. Rajiv Gandhi

ಭಾರತ ರತ್ನ ದಿ.ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ 

ಹಾನಗಲ್  21: ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಬುಧವಾರ ಆಧುನಿಕ ಭಾರತದ ಕನಸುಗಾರ, ಮಾಜಿ ಪ್ರಧಾನಿ, ಭಾರತ ರತ್ನ ದಿ.ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ ಆಚರಿಸಲಾಯಿತು. 

  ಈ ಸಂದರ್ಭದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮುಖಂಡರು ಮಾತನಾಡಿ ನವ ಭಾರತ ನಿರ್ಮಾಣಕ್ಕೆ ದಿ.ರಾಜೀವ್ ಗಾಂಧಿ ಅವರು ಆ ದಿನಗಳಲ್ಲಿಯೇ ಅಡಿಪಾಯ ಹಾಕಿದ್ದಾರೆ. ಆರೋಗ್ಯ, ಶಿಕ್ಷಣ, ರಾಜಕೀಯ ಪಾತಿನಿಧ್ಯ, ತಂತ್ರಜ್ಞಾನ, ಅಧಿಕಾರ ವಿಕೇಂದ್ರೀಕರಣ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ ತಂದಿದ್ದಾರೆ. 18 ನೇ ವಯಸ್ಸಿನವರಿಗೆ ಮತ ಚಲಾಯಿಸುವ ಹಕ್ಕು ದೊರಕಿಸಿದ್ದಾರೆ. ಸರಿಯಾದ ದಿಕ್ಕಿನಲ್ಲಿ ಸಮರ್ಥವಾಗಿ ದೇಶವನ್ನು ಮುನ್ನಡೆಸಿದ ಶ್ರೇಯಸ್ಸು ಅವರಿಗೆ ಸಲ್ಲಬೇಕಿದೆ. ಅವರು ಕಂಡ ಕನಸು ನನಸು ಮಾಡುವ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದರು. 

      ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ,ಮಾಜಿ ಅಧ್ಯಕ್ಷ ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಮುಖಂಡರಾದ ಮಂಜಣ್ಣ ನೀಲಗುಂದ, ಗುರುರಾಜ್ ನಿಂಗೋಜಿ, ಸಂತೋಷ ಸುಣಗಾರ, ಮೇಕಾಜಿ ಕಲಾಲ, ಯುವ ಕಾಂಗ್ರೆಸ್ ತಾಲೂಕಾಧ್ಯಕ್ಷ ಸಂತೋಷ ದುಂಡಣ್ಣನವರ, ಸುರೇಶ ನಾಗಣ್ಣನವರ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.