ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರೀಶೀಲನೆ

Deputy Commissioner T. Bhubalan visits and inspects CET examination centers

ಲೋಕದರ್ಶನ ವರದಿ 

 ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರೀಶೀಲನೆ  

ವಿಜಯಪುರ 16:  ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ನಗರದ ವಿಬಿ ದರಬಾರ ಕಾಲೇಜಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿಇಟಿ) ಕೇಂದ್ರಕ್ಕೆ  ಭೇಟಿ ನೀಡಿ,   ಪರೀಕ್ಷಾ ವ್ಯವಸ್ಥೆ, ವಿದ್ಯಾರ್ಥಿಗಳ ಆಸನ ವ್ಯವಸ್ಥೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳ ಕಾರ್ಯ ವಿಧಾನವನ್ನು ಅವರು ಪರೀಶೀಲಿಸಿದರು.  

ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಯನ್ವಯ ಕಾರ್ಯ ನಿರ್ವಹಣೆ ಹಾಗೂ ಅವರಿಂದ ಪರೀಕ್ಷಾ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.              ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ವಹಿಸಿಕೊಟ್ಟ ಜವಾಬ್ದಾರಿಯನ್ನು ಸುಸೂತ್ರವಾಗಿ ಹಾಗೂ ಸಮರ​‍್ಕವಾಗಿ ನಿರ್ವಹಿಸಬೇಕೆಂದು ಹೇಳಿದರು. ಸದರಿ ಪರೀಕ್ಷಾ ಕೇಂದ್ರದಲ್ಲಿನ ವೆಬ್ ಕಾಸ್ಟಿಂಗ್ ಕಾರ್ಯ ನಿರ್ವಹಣೆ ವ್ಯವಸ್ಥೆ ಬಗ್ಗೆ ವೀಕ್ಷಿಸಿದರು.  

ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.  

(ಫೋಟೋ ಲಗತ್ತಿಸಲಾಗಿದೆ: ಎ1 ರಿಂದ ಎ3) 



ಜೂನಿಯರ್ ಸೆಕ್ರೆಟರಿ ಅಸಿಸ್ಟಂಟ್ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ 


ವಿಜಯಪುರ 16: ಮೈಸೂರಿನ ಕೇಂದ್ರಿಯ ಆಹಾರ ತಂತ್ರಜ್ಞಾನ ಸಂಶೋಧನಾಲಯದಲ್ಲಿ ಜೂನಿಯರ್ ಸೆಕ್ರೆಟರಿ ಅಸಿಸ್ಟಂಟ್ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ              ಅರ್ಜಿ ಆಹ್ವಾನಿಸಲಾಗಿದೆ, ಮಾಜಿ ಸೈನಿಕರಿಗಾಗಿ 01 ಹುದ್ದೆ ಮೀಸಲಿದ್ದು, ಆಸಕ್ತ ಮಾಜಿ ಸೈನಿಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಹಾಗೂ ಮಾಹಿತಿ ವಿವರಗಳಿಗಾಗಿ ಣಣಠಿ://ಛಿಜಿಣಡಿ.ಡಿ.ಟಿ ಅಥವಾ ಣಣಠಿ://ಡಿಜಛಿಡಿಣಣಟಜಟಿಣ.ಛಿಜಿಣಡಿ.ಡಿ.ಟಿ  ವೆಬ್‌ಸೈಟ್ ವೀಕ್ಷಿಸಬಹುದಾಗಿದೆ. 

 ಹೆಚ್ಚಿನ ಮಾಹಿತಿಗಾಗಿ ವಿಜಯಪುರ  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ: 08352-250913ಗೆ ಹಾಗೂ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.