ಲೋಕದರ್ಶನವರದಿ
ರಾಣೇಬೆನ್ನೂರು-ಮೇ.28: ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎನ್ನುವ ತತ್ವವನ್ನು ಪ್ರತಿಯೊಬ್ಬ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮನನ ಮಾಡಿಕೊಂಡು ತಮ್ಮ ಪಾಲಿನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕ ಮತ್ತು ನಿಷ್ಠೆಯಿಂದ ಮಾಡುವುದರ ಮೂಲಕ ಸಮಗ್ರ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಅವರು ಗುರುವಾರ ಸಂಜೆ ಇಲ್ಲಿನ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರೋನಾ ವೈರಸ್ ಕೋವಿಂಡ್-19 ಇರುವುದರಿಂದ ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಂಡು ನಿತ್ಯವೂ ಸ್ವಚ್ಛತೆಗೆ ಆಧ್ಯತೆ ನೀಡಬೇಕು. ಕಾಟಾಚಾರಕ್ಕೆ ಯಾವ ಕೆಲಸವೂ ಇರಬಾರದು. ಎಂಥಹ ಸಂದರ್ಭದಲ್ಲಿಯೂ ಗ್ರಾಮಗಳಲ್ಲಿ ಅಸ್ವಚ್ಛತೆ ಕಂಡು ಬರಬಾರದು. ಅದಕ್ಕೆ ಅಲ್ಲಿನ ಸಿಬ್ಬಂಧಿ ಮತ್ತು ಅಭಿವೃದ್ಧಿ ಅಧಿಕಾರಿಯೇ ಜವಾಬ್ದಾರಿ ಹೋರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮಗಳಲ್ಲಿ ನಿಮರ್ಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಬಹುತೇಕವಾಗಿ ನಿಕ್ಸ್ರೀಯಗೊಂಡು ಸ್ಥಗಿತವಾಗಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಅದಕ್ಕೆ ಸಂಬಂಧಿಸಿದವರು ಕೂಡಲೇ ನಿರ್ವಹಣೆಯ ಜವಾಬ್ದಾರಿ ನಿಭಾಯಿಸಬೇಕಾಗುತ್ತದೆ ಕೂಡಲೇ ಸ್ಥಗಿತಗೊಂಡಿರುವ ಕುಡಿಯುವ ನೀರಿನ ಘಟಕಗಳು ಕೂಡಲೇ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಗ್ರಾಮಗಳಲ್ಲಿ ಬಹುತೇಕವಾಗಿ ಸರಿಯಾದ ರೀತಿಯಲ್ಲಿ ಕಲುಷಿತ ನೀರು ಹರಿಯುವ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯದೇ ಅಲ್ಲಲ್ಲಿ ನೀರು ನಿಂತು ಅನೇಕ ಕಾಯಿಲೆಗಳಿಗೆ ಕಾರಣವಾಗಬಹುದು. ಗಟಾರದಲ್ಲಿ ನೀರು ನಿಲ್ಲದಂತೆ ಮತ್ತು ಕಸ-ಕಡ್ಡಿ ಬೀಳದಂತೆ ಸರಾಗವಾಗಿ ನೀರು ಹರಿಯಲು ಗ್ರಾಮ ಪಂಚಾಯಿತಿ ಸಿಬ್ಬಂಧಿ ಕೂಡಲೇ ಕ್ರಮ ಕೈಗೊಳ್ಳಬೇಕು. ಮತ್ತು ರಸ್ತೆಗಳ ಪಕ್ಕದಲ್ಲಿನ ತಿಪ್ಪೆಗುಂಡಿಗಳನ್ನು ತೆಗೆಸಿ ಗ್ರಾಮ ಸುಂದರತೆಗೆ ಕ್ರಮ ಕೈಗೊಳ್ಳಬೇಕು. ಇದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುವುದು ಎಂದು ಅವರು ಹಂತ-ಹಂತವಾಗಿ ಗ್ರಾಮಗಳಲ್ಲಿ ಮುಂಜಾಗೃತಾ ಕ್ರಮವಾಗಿ ಫಾಗಿಂಗ್ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಡಾ|| ಎಸ್.ಎಂ.ಕಾಂಬಳೆ, ವ್ಯವಸ್ಥಾಪಕ ಬಿ.ಎಸ್.ಶಿಡೇನೂರ, ಸೇರಿದಂತೆ ಮತ್ತಿತರರು ಇದ್ದರು. ತಾಲೂಕಿನ ಎಲ್ಲ ಗ್ರಾಮಗಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಂಡಿದ್ದರು.