ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ

Dignitaries launch International Women's Day program

ರಾಯಬಾಗ, 29;  ಮಹಿಳೆಯರ ಸಬಲೀಕರಣ ಮತ್ತು ಅವರ ಸರ್ವತೋಮುಖ ಬೆಳವಣಿಗೆಗೆ ಬೇಕಾಗುವ ಸೌಲಭ್ಯ ಕಲ್ಪಿಸುವ ಕೆಲಸ ಆಗಬೇಕಿದೆ ಎಂದು ಮಾಸ್ ಸಂಸ್ಥೆಯ ಸಿಇಒ ಡಾ.ಸೀತವ್ವ ಜೋಡಟ್ಟಿ ಹೇಳಿದರು. 

ಗುರುವಾರ ಪಟ್ಟಣದ ನೌಕರರ ಭವನದಲ್ಲಿ ಮಹಿಳಾ ಅಭಿವೃದ್ಧಿ ಸಂರಕ್ಷಣಾ ಸಂಸ್ಥೆ ಘಟಪ್ರಭಾ ಇವರು ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸಂಸ್ಥೆಯಿಂದ ಸಮಾಜದಲ್ಲಿರುವ ಹೆಣ್ಣು ಮಕ್ಕಳ ಮೇಲೆ ಆಗುವ ಶೋಷಣೆ, ತಾರತಮ್ಯ, ದೌರ್ಜನ್ಯ ವಿರುದ್ಧ 27 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ ಎಂದರು. 

ಸಂಸ್ಥೆಯ ಅಧ್ಯಕ್ಷೆ ಶಾಂತಾ ಮಾಂಗ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಜಯಶ್ರೀ ದೊಡಮನಿ ಹಾಗೂ ಸಂಯೋಜಕರು, ಪ್ರೇರಕರು ಮತ್ತು ಸಿಬ್ಬಂದಿ ಇದ್ದರು.