ಶಂಕರಾನಂದ ಪುಣ್ಯಸ್ಮರಣೆ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳಗಾವಿ, 21: ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ ಅವರ 10 ನೇ ವರ್ಷದ ಸ್ಮರಣಾರ್ಥವಾಗಿ ಗುರುವಾರ ಅವರ ಅಭಿಮಾನಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಅವರ ಅಭಿಮಾನಿಗಳು ಜನರಲ್ ವಾರ್ಡ, ಮಹಿಳೆಯರ ವಾರ್ಡಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಣೆ ಮಾಡಿ ಹಣ್ಣುಗಳನ್ನು ವಿತರಣೆ ಮಾಡಿದರು. ಮಾಜಿ ಕೇಂದ್ರ ಸಚಿವರಾಗಿದ್ದ ಬಿ ಶಂಕ್ರಾನಂದ ಅವರು ನಿಧನ ಹೊಂದಿ 10 ವರ್ಷಗಳು ಪೂರ್ವಗೊಂಡಿರುವ ಹಿನ್ನಲೆ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಬಿ ಶಂಕರಾನಂದ ಅವರ ಅನೇಕ ಅಭಿಮಾನಿಗಳು ಉಪಸ್ಥಿತರಿದ್ದರು.