ಸಚಿವರಿಂದ ಹೊಲಿಗೆ ಯಂತ್ರ ವಿತರಣೆ

ಗದಗ 05: ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಅವರು ಬೆಟಗೇರಿಯ ಟರ್ನಲ್ ಪೇಟೆಯಲ್ಲಿಂದು ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆಗಾಗಿ ತರಬೇತಿ ಪಡೆದ ಮೂವತ್ತು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಿ ಸರಕಾರದ ವತಿಯಿಂದ ವಿತರಿಸಲಾದ ಈ ಯಂತ್ರಗಳಿಂದ ಮಹಿಳೆಯರು ಆಥರ್ಿಕವಾಗಿ ಸಧೃಢರಾಗಲು ಕರೇ ನೀಡಿದರು. ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಡಾ. ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರಾದ ಎ.ಎಸ್.ರುದ್ರೇಶಿ, ನಗರ ಸಭೆ ಸದಸ್ಯರು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.