ಕೊಪ್ಪಳ 21: ಜಿಲ್ಲೆಯ ವಿವಿಧ ಸ್ಥಳಗಳಿಗೆ ಇಂದು (ಸೆ.21) ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ರವರು ಭೇಟಿ ನೀಡಿ ಪರಿಶೀಲಿಸಿದರು.
ತಾಲ್ಲೂಕಿನ ಗುನ್ನಳ್ಳಿ ಗ್ರಾಮದ ಹತ್ತಿರ ನಿಮರ್ಾಣಗೊಂಡ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ರವರು ಭೇಟಿ ನೀಡಿ ಅವಶ್ಯವಿರುವ ಆವರಣ ಗೋಡೆ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿದರು. ನಗರದ ಗವಿಶ್ರೀ ನಗರದ 3ನೇ ಅಡ್ಡರಸ್ತೆಯಲ್ಲಿ ನಿರ್ಮಿಸಲಾದ ಸಿಸಿ ರಸ್ತೆಯ ಕಳಪೆ ಕಾಮಗಾರಿಯ ಕುರಿತು ಸಾರ್ವಜನಿಕರಿಂದ ಬಂದ ದೂರಿನನ್ವಯ ನಗರಾಭಿವೃದ್ಧಿ ಕೋಶ ಅಧಿಕಾರಿ ಹಾಗೂ ತಹಶೀಲ್ದಾರರೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ನಗರದ ಸ್ವಾಮಿ ವಿವೇಕಾನಂದ ಶಾಲೆಯ ಹತ್ತಿರ ಮತ್ತು ಕೆ.ಇ.ಬಿ ಹತ್ತಿರವಿರುವ ಇರುವ ರೈಲ್ವೆ ಲೈನ್ ಬಳಿ ರಸ್ತೆ ಕೆಳ ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅಗತ್ಯವಿರುವ ಜಮೀನುಗಳ ಭೂಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ಉಪವಿಭಾಗಾಧಿಕಾರಿ ಸಿ.ಡಿ ಗೀತಾ, ತಹಶೀಲ್ದಾರ ಜೆ. ಬಿ ಮಜ್ಗಿ, ರೈಲ್ವೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಸ್ಕೌಟ್ಸ್ & ಗೈಡ್ಸ್ ತರಬೇತಿ ಕೇಂದ್ರ, ನಗರಾಭಿವೃದ್ಧಿ ಕೋಶ, ನಗರಸಭೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.