ಸಿಇಟಿ ಪರೀಕ್ಷಾ ಕೇಂದ್ರ ಹಾಗೂ ಎಪಿಎಂಸಿ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಭೇಟಿ
ಹಾವೇರಿ 16 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುತ್ತಿರುವ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಹಾವೇರಿ ನಗರದ ಜಿ.ಎಚ್.ಕಾಲೇಜ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಬುಧವಾರ ಹಾಗೂ ಗುರುವಾರ ಎರಡು ದಿನ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಸುಗಮ ಪರೀಕ್ಷೆ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇಂದು 4587 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ ಜಿಲ್ಲಾಡಳಿತದಿಂದ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.ಪರೀಕ್ಷೆಗಳು ನಡೆಯುವ ಎಲ್ಲ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಸುತ್ತಲೂ ಶಾಂತತೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಇದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸಲಾಗಿದೆ ಎಂದರು.ಎಪಿಎಂಸಿ ಗೋಡೌನ್‌ಗೆ ಭೇಟಿ: ಇಂದು ಜಿಲ್ಲಾಧಿಕಾರಿಗಳು ಶಿಗ್ಗಾಂವ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆಯ ಗೋಡೌನ್‌ಗೆ ಭೇಟಿ ನೀಡಿ ಪರೀಶೀಲಿಸಿದ ಅವರು, ಗೋಡೌನ್‌ಗಳನ್ನು ಸುಸ್ಥಿತಿಯಲ್ಲಿ ಹಾಗೂ ಸ್ವಚ್ಛಗಾಗಿ ಇಟ್ಟುಕೊಳ್ಳಬೇಕು. ಮಳೆ ನೀರು ಸೋರದಂತೆ, ಇಲಿ, ಬೆಕ್ಕುಗಳ ಹಾವಳಿ ಇರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಸಿಬ್ಬಂದಿಗಳ ನಿಯೋಜನೆ ಮಾಡಬೇಕು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೋಡೌನ್‌ಗಳು ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.ಏಪ್ರಿಲ್ 15 ರಿಂದ ಹಿಂಗಾರು ಜೋಳ ಖರೀದಿ ಕೇಂದ್ರ ಆರಂಭಿಸಲಾಗಿದೆ. ನಿಗದಿತ ಗುರಿ ಸಾಧನೆವರೆಗೆ ಹಾಗೂ ಹೆಚ್ಚಿನ ಸಂಖ್ಯೆ ರೈತರಿಂದ ಜೋಳ ಸಂಗ್ರಹಣೆ ಮಾಡುವ ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಯಾವುದೇ ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಸಲಹೆ ನೀಡಿದರು.