ಗದಗ 23: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರೀಶೀಲನಾ ಸಭೆ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ತಾರಾಮಣಿ ಜಿ.ಎಚ್, ತಹಶೀಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.