ವಿಜಯಪುರ ಮಾ.19 : ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಅಪಘಾತಕ್ಕೊಳಗಾಗಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರೊಂದಿಗೆ ಅವರ ಆರೋಗ್ಯ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.