ಬೆಳಗಾವಿ 09: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಸಂಸ್ಥೆಯ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 9ನೆ ಮೇ 2025 ರಂದು ದೇಹದಾನ ಮತ್ತು ಅಂಗಾಂಗ ದಾನಗಳ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ದೇಹದಾನ ಜಾಗೃತಿಗಾಗಿ ತಂದೆಯ ಮೃತ ದೇಹ ಛೇದನ ಮಾಡಿ ವೈದ್ಯಕೀಯ ಇತಿಹಾಸ ಸೃಷ್ಟಿಸಿದ, ಕೆಎಲ್‌ಇ ಶ್ರೀ ಬಿ. ಎಮ್. ಕಂಕಣವಾಡಿ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಶರೀರ ರಚನಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಹಾಗೂ ಬೈಲಹೊಂಗಲದ ಡಾ. ರಾಮಣ್ಣನವರ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಡಾ. ಮಹಾಂತೇಶ ರಾಮಣ್ಣನವರ ಅವರು ಭಾಗವಹಿಸಿ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆಯಿರಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೇಹದಾನ ಮತ್ತು ಅಂಗಾಂಗ ದಾನಗಳ ಮಹತ್ವ, ದೇಹದಾನಕ್ಕೀರುವ ಪ್ರಕ್ರಿಯೆ, ದೇಹದಾನಕ್ಕೀರುವ ನಿಯಮಗಳೇನು? ಅಂಗಾಂಗ ದಾನ ಮಾಡಲು ನೊಂದಣೆ ಮಾಡಿಕೊಳ್ಳುವುದು ಹೇಗೆ ಮತ್ತು ಅಂಗಾಂಗ ದಾನಗಳ ಬಗ್ಗೆ ಇರುವ ತಪ್ಪು ತಿಳುವಳಿಕೆಗಳ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.