ಸರ್ವಜ್ಞ ವಿದ್ಯಾಪೀಠದಲ್ಲಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ
ತಾಳಿಕೋಟಿ 14: ಪಟ್ಟಣದ ಪ್ರತಿಷ್ಠಿತ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ,ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತೋತ್ಸವವನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಸ್ಥಾಪಕ ಅಧ್ಯಕ್ಷ ಸಿದ್ಧನಗೌಡ ಬ. ಮಂಗಳೂರ, ಮುಖ್ಯೋಪಾಧ್ಯ ಸಂತೋಷ ಪವಾರ, ಮುಖ್ಯ ಅತಿಥಿಗಳಾದ ಬಿ.ಎಸ್ ವಡಗೇರಿ,ಬಸವರಾಜ ಸವದತ್ತಿ, ಸಿದ್ದನಗೌಡ ಮುದನೂರು, ಶಿವಕುಮಾರ ಕುಂಬಾರ, ಮುಭಾರಕ್ ಬನಹಟ್ಟಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.