ಏಪ್ರಿಲ್ 14ರಂದು ಡಾ. ಬಿ.ಆರ್‌. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ

Dr. B.R. Ambedkar's 134th birth anniversary celebrated on April 14

ಏಪ್ರಿಲ್ 14ರಂದು ಡಾ. ಬಿ.ಆರ್‌. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ 

ಗದಗ 13 : ನಗರದಲ್ಲಿ ಗದಗ ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ವಿಭಾಗದ ವತಿಯಿಂದ ಏಪ್ರಿಲ್ 14ರಂದು ಡಾ. ಬಿ.ಆರ್‌. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಜರುಗಲಿದೆ.  

ಏ. 14ರ ಸೋಮವಾರ ಬೆಳಿಗ್ಗೆ 9.30ಕ್ಕೆ ನಗರಸಭೆಯ ಆವರಣದಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರೆ​‍್ಣ ಹಾಗೂ ಬೆಳಗ್ಗೆ 10.30ಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌.ಕೆ. ಪಾಟೀಲ ಹಾಗೂ ರಾಜ್ಯದ ಖನಿಜ ಅಭಿವೃದ್ದಿ ನಿಗಮದ ಅಧ್ಯಕ್ಷರು ರೋಣದ ಶಾಸಕರಾದ ಗದಗ ಜಿಲ್ಲಾ ಕಾಂಗ್ರೆಸ ಸಮಿತಿ ಅಧ್ಯಕ್ಷರಾದ ಜಿ.ಎಸ್‌. ಪಾಟೀಲ ಅವರ ನೇತೃತ್ವದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮಾಜಿ ಶಾಸಕರಾದ ಡಿ.ಆರ್‌. ಪಾಟೀಲ, ಬಿ.ಆರ್‌. ಯಾವಗಲ್ಲ, ಜಿ.ಎಸ್‌. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದ ಗಡ್ಡದ್ದೇವರಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೃಷ್ಣಗೌಡ ಎಚ್‌. ಪಾಟೀಲ ಸೇರಿದಂತೆ ಹಲವರು ಭಾಗವಹಿಸುವರು.  

ಈ ಕಾರ್ಯಕ್ರಮಕ್ಕೆ ಯಾವತ್ತು ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪಧಾದಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್‌ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು *ಗದಗ- ಜಿಲ್ಲಾ ಪರಿಶಿಷ್ಟ ಜಾತಿ ಕಾಂಗ್ರೆಸ್ ವಿಭಾಗ  ಅಧ್ಯಕ್ಷರಾದ ಬಸವರಾಜ ಕಡೇಮನಿ   ಹಾಗೂ ಗದಗ ಬೆಟಗೇರಿ ಪರಿಶಿಷ್ಟ ಜಾತಿ ಕಾಂಗ್ರೆಸ ವಿಭಾಗ ಅಧ್ಯಕ್ಷರಾದ ಶಂಭು ಕಾಳೆ ವಿನಂತಿಸಿದ್ದಾರೆ.