ಜಿಲ್ಲಾಡಳಿತದಿಂದ ಸರಳವಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

ಹಾವೇರಿ:ಎ. 14: ಕೋವಿಡ್ ಹಿನ್ನೆಲೆಯಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತಿಯನ್ನು ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು. 

ಎಪ್ರಿಲ್ 14ರ ಮಂಗಳವಾರ ಮುಂಜಾನೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಶಾಸಕರಾದ ನೆಹರೂ ಓಲೇಕಾರ ಅವರು ಶ್ರದ್ಧಾಪೂರ್ವಕವಾಗಿ ನಮಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಧಿಕಾರಿಗಳು, ಗಣ್ಯರು ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನೆಹರು ಓಲೇಕಾರ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ, ಮುತ್ಸದ್ದಿ, ಜ್ಞಾನದ ಭಂಡಾರ, ಸಮಾಜಿಕ ಅಸಮಾನತೆ ತೊಡೆದು ಹಾಕಲು ಶ್ರಮಿಸಿದವರು. ಶಿಕ್ಷಣ ಸಂಘಟನೆ, ಹೋರಾಟದ ಮೂಲಕ ಸಾಮಾಜಿಕ ನ್ಯಾಯ ತಮ್ಮ ಹಕ್ಕುಗಳನ್ನು ಪಡೆಯಲು ಕರೆ ಕೊಟ್ಟರು. ಅವರು ಸಿದ್ಧಾಂತಗಳನ್ನು ಜೀವನದಲ್ಲಿ  ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಹಾಗೂ ಸಾಧನೆ ಕುರಿತು ವಿವರಿಸುತ್ತಾ ಜಾತಿ ರಹಿತ, ವರ್ಗ ರಹಿತ, ಲಿಂಗಸಮಾನತೆ ಸಮ ಸಮಾಜ ನಿಮರ್ಾಣಕ್ಕೆ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಂದು ಬಣ್ಣಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಸಮಾಜ ಕಲ್ಯಾಣಾಧಿಕಾರಿ ಚೈತ್ರಾ ಹಾಗೂ ವಿವಿಧ ಇಲಾಖಾಧಿಕಾರಿಗಳು , ಸಮಾಜದ ಮುಖಂಡರು ಭಾಗವಹಿಸಿದ್ದರು.