ಗದಗ 06: ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ವಿಡಿಯೋ ಪ್ರದರ್ಶನ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಗದಗ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಅವರು ಚಾಲನೆ ನೀಡಿದರು.
ರಾಜ್ಯ ಮಟ್ಟದಿಂದ ಆಗಮಿಸಿದ ವಿಡೀಯೊ ಪ್ರದರ್ಶನದ ವಾಹನವು ಜಿಲ್ಲೆಯಾದ್ಯಂತ 5 ದಿನ ಸಂಚರಿಸಿ ಆರೋಗ್ಯ ಕಾರ್ಯಕ್ರಮ / ಯೋಜನೆಗಳು ಹಾಗೂ "ಕರೋನಾ ವೈರಸ್ ಕುರಿತು ಪ್ರಚಾರ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿ.ಪಂ. ಅಧ್ಯಕ್ಷರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಕೆ ಆನಂದ ಇವರು ಕರೋನಾ ವೈರಸ್ ಕುರಿತು ಮುಂಜಾಗೃತ ಕ್ರಮಗಳ ಬಗ್ಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ. ಸತೀಶ ಬಸರಿಗಿಡದ, ಇವರು ಕರೋನಾ ವೈರಸ್ ಕುರಿತು ಭಯ ಬೇಡವೆಂದು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್ಎಸ್ ನೀಲಗುಂದ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಎಮ್ ಬಿ ಗೊಜನೂರು, ಜಿಲ್ಲಾ ಕು.ಕ ಅಧಿಕಾರಿ ಡಾ. ವಾಯ್ಕೆ ಭಜಂತ್ರಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಂಯಂತ್ರಣ ಅಧಿಕಾರಿ ಡಾ. ಅರುಂಧತಿ ಕುಲಕಣರ್ಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಪ್ರಭಾರಿ ಅಧಿಕಾರಿಗಳು ಡಾ. ಎಸ್ಎಸ್ ನೀಲಗುಂದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್ ಸುರೇಶ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯವರು ಭಾಗವಹಿಸಿದ್ದರು.