ಕೊಪ್ಪಳ 23: ಜಿಲ್ಲಾ ಸ್ವೀಪ್ ಸಮಿತಿಯಿಂದ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾದ ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕೊಪ್ಪಳ ಜಿಲ್ಲಾ ಸ್ವೀಪ ಸಮಿತಿ ವತಿಯಿಂದ ಗುರುವಾರದಂದು ತಾಲೂಕ ಮಟ್ಟದ ಅಧಿಕಾರಿಳಿಗೆ ಮತ್ತು ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಭೋಧಿಸುವುದರೊಂದಿಗೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಮತ್ತು ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರದ ಕುರಿತು ಮಾಹಿತಿ ಕಾಯರ್ಾಗಾರವನ್ನು ಹಮ್ಮಿಕೊಳ್ಳಲಾಯಿತು. ಅದರಂತೆ ಜಿಲ್ಲಾ ಆಡಿಟೋರಿಯಂ ಹಾಲ್ನಲ್ಲಿ ಜಿಲ್ಲಾ ಮತ್ತು ತಾಲೂಕ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಗ್ರಾಮ ಪಂಚಾಯತ ಮಟ್ಟದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಕಾರ್ಯದಶರ್ಿಗಳಿಗೆ ಮತ್ತು ಗಣಕ ಯಂತ್ರ ನಿವರ್ಾಹಕರುಗಳಿಗೆ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಭೋಧಿಸುವುದರೊಂದಿಗೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಮತ್ತು ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರದ ಕುರಿತು ಮಾಹಿತಿ ನೀಡಲಾಯಿತು.
ಜಿ.ಪಂ. ಸಭಾಂಗಣದಲ್ಲಿ ಹಾಗೂ ಶುಕ್ರವಾರದಂದು ಜಿಲ್ಲೆಯ ವಿವಿಧ ತಾಲೂಕಿನ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರಿಗ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಭೋಧಿಸುವುದರೊಂದಿಗೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಮತ್ತು ತಮ್ಮ ಸುತ್ತಲಿನ ವ್ಯಾಪ್ತಿಯಲ್ಲಿರುವ ನಾಗರೀಕರಿಗೆ ಮತದಾನದ ಮಹತ್ವದ ಕುರಿತು ಮಾಹಿತಿ ನೀಡುವಂತೆ ತಿಳಿಸಲಾಯಿತು. ಹಾಗೇ ಇ.ವಿ.ಎಂ. ಮತ್ತು ವಿ.ವಿ. ಪ್ಯಾಟ್ ಮತ ಖಾತ್ರಿ ಯಂತ್ರದ ಕುರಿತು ಜಾಗೃತಿ ಮೂಡಿಸಲಾಯಿತು ಎಂದು ಜಿ.ಪಂ. ಕಾಯರ್ಾಲಯವು ತಿಳಿಸಿದೆ.