ಲೋಕದರ್ಶನ ವರದಿ
ವಿಜಯಪುರ 30:ನಗರದಲ್ಲಿ ಫೆಬ್ರುವರಿ 23 ಹಾಗೂ 24 ರಂದು ನಡೆಯಲಿರುವ ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಈಗಾಗಲೇ ನೇಮಕ ಮಾಡಿರುವ ವಿವಿಧ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಮಿನಿ ಉದ್ಯೋಗ ಮೇಳದ ನಿರ್ವಹಣೆಗೆ ಸಂಬಂಧಿಸಿದಂತೆ ಉಪ ಸಮಿತಿಗಳ ಕಾರ್ಯಚಟುವಟಿಕೆಗಳ ಕುರಿತ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೌಶಲ್ಯ ಹೊಂದಿರುವ ನಿರುದ್ಯೋಗಿಗಳ ಸಂಖ್ಯೆ ಕುರಿತು ನಿಖರ ದತ್ತಾಂಶ ಸಂಗ್ರಹಿಸಬೇಕು. ಈಗಾಗಲೇ ಉದ್ಯೋಗ ಮೇಳಕ್ಕೆ ಸಂಬಂಧಿಸಿದ ವೆಬ್ಸೈಟ್ ತಿತಿತಿ.ತರಿಚಿಥಿಚಿಠಿಣಡಿಚಿಣಜಥಿಠರಟಜಟಚಿ.ಛಿಠಟ ನ್ನು ಸಹ ಉದ್ಘಾಟಿಸಲಾಗಿದ್ದು, ಆನಲೈನ್ ಮತ್ತು ಆಫಲೈನ್ ಅಜರ್ಿ ಸಲ್ಲಿಕೆಗೆ ಅವಕಾಶವಿದೆ. ಆದ್ದರಿಂದ ಈ ಕುರಿತು ಗ್ರಾಮ ಪಂಚಾಯತವಾರು ವಿವಿಧ ಪ್ರಚಾರ ಸಾಮಗ್ರಿಗಳನ್ನು ಬಳಸಿಕೊಂಡು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉದ್ಯೋಗ ಮೇಳಕ್ಕೆ ಬರುವ ವಿವಿಧ ಉದ್ದಿಮೆಗಳು, ಖಾಸಗಿ ಸಂಸ್ಥೆಗಳು ಭಾಗವಹಿಸುವಿಕೆ ಕುರಿತು ಫೆಬ್ರುವರಿ 10 ರೊಳಗೆ ನಿಖರ ಮಾಹಿತಿ ಸಂಗ್ರಹಿಸಿ ಪಟ್ಟಿಯನ್ನು ಸಿದ್ಧಪಡಿಸಬೇಕು. ಮೇಳದಲ್ಲಿ ಭಾಗವಹಿಸುವ ಅತಿಥಿಗಳಿಗೆ ಉಟೋಪಚಾರ, ಮೇಳದ ಸ್ಥಳದ ಶಾಮಿಯಾನ, ಸ್ಟಾಲ್ಗಳ ಸ್ಥಾಪನೆ, ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ನೇಮಕ ಮಾಡಿದ ಸಮಿತಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕೌಶಲ್ಯಾಭಿವೃದ್ದಿ ಇಲಾಖೆ ವತಿಯಿಂದ ಈಗಾಗಲೇ ತರಬೇತಿಗೊಂಡ ಅಭ್ಯಥರ್ಿಗಳಿಂದ ಅಜರ್ಿ ಸಲ್ಲಿಕೆಗೆ ಪ್ರೋತ್ಸಾಹ ನೀಡಿ, ಉದ್ದಿಮೆ ಬಯಸುವ ಅರ್ಹತೆಯುಳ್ಳ ಅಭ್ಯಥರ್ಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದರು.
ಆಸಕ್ತ ಉದ್ಯೋಗ ಆಕಾಂಕ್ಷಿಗಳು ಮೇಲೆ ತಿಳಿಸಿದ ಜಾಲತಾಣ ಹಾಗೂ ದೂರವಾಣಿ ಸಂಖ್ಯೆಗಳಾದ 08352-250383, 297019, 08354-235337, ಮೊ: 87621071160, 8660786206 ಸಂಖ್ಯೆಗಳಿಗೆ ಸಂಪಕರ್ಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಕೌಶಲ್ಯಾಭಿವೃದ್ದಿ ಅಧಿಕಾರಿ ರಮೇಶ ದೇಸಾಯಿ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.