ಫೆ. 20 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಹಾಗೂ ಪದಾಧಿಕಾರಿಗಳ ಸಮಾವೇಶ

Feb. Conference of Directors and office bearers of State Government Employees Association on 20th

ಫೆ. 20 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಹಾಗೂ ಪದಾಧಿಕಾರಿಗಳ ಸಮಾವೇಶ  

ಗದಗ 16: ಬೆಂಗಳೂರಿನ ಮೇತ್ರಿ ವೃತ್ತದ ಹತ್ತಿರ ಅರಮನೆ ಆವರಣ ತ್ರಿಪುರವಾಸಿನಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲೂಕು ಶಾಖೆಗಳ ನಿರ್ದೆಶಕರ-ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಳಿಗ್ಗೆ 11.45ಕ್ಕೆ ಜರುಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಶಾಖೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಘದ ಚುನಾಯಿತ ನಿರ್ದೆಶಕರು ಮತ್ತು ಪದಾಕಾರಿಗಳು ಭಾಗವಹಿಸಲಿದ್ದಾರೆ. ಫೆ. 20ರಂದು ಬೆಳಿಗ್ಗೆ 10ಕ್ಕೆ 'ಪ್ರಜಾಸ್ನೇಹಿ ಆಡಳಿತ ಕಾರ್ಯಾಗಾರ ಆಯೋಜಿಸಿದ್ದು, ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆ, ಪ್ರಾಮಾಣಿಕತೆ ವಿಷಯ ಕುರಿತಂತೆ ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ಉಪನ್ಯಾಸ ನೀಡಲಿದ್ದಾರೆ. 'ಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರ' ವಿಷಯ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಉಪನ್ಯಾಸ ನೀಡಲಿದ್ದಾರೆ. 'ಮಾಹಿತಿ ಹಕ್ಕು ಅಧಿನಿಯಮ(2005) ಸವಾಲುಗಳು-ಪರಿಹಾರಗಳು' ವಿಷಯವಾಗಿ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ರವೀಂದ್ರ ಗುರುನಾಥ ದಾಕಪ್ಪ ಇವರು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿರುವ ಈ  ಸಮಾವೇಶ ಹಾಗೂ ಕಾರ್ಯಾಗಾರದಲ್ಲಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್‌. ಷಡಾಕ್ಷರಿ ಹಾಗೂ ರಾಜ್ಯ ಹಿರಿಯ ಉಪಾ‘್ಯಕ್ಷ ರವಿ ಗುಂಜೀಕರ ಅವರು ತಿಳಿಸಿದ್ದಾರೆ.