ಪಣಜಿ, ಮಾ 26,ಗೋವಾದಲ್ಲಿ ಕೋವಿಡ್–19 ನ ಮೊದಲ ಮೂರು ಪ್ರಕರಣಗಳು ವರದಿಯಗಿವೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವರು, ‘ರಾಜ್ಯದಲ್ಲಿ ಮೂರು ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಕುರಿತು ಆರೋಗ್ಯ ಸೇವೆಗಳ ನಿರ್ದೇಶನಾಲಯ ಮಾಹಿತಿ ನೀಡಿದೆ. ಸೋಂಕಿತರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ‘ ಎಂದಿದ್ದಾರೆ. ಸೋಂಕಿತರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಸಂಪರ್ಕಿಸಿದ ವ್ಯಕ್ತಿಗಳನ್ನು ಕೂಡ ಪತ್ತೆ ಹೆಚ್ಚಲಾಗಿದ್ದು, ಪ್ರತ್ಯೆಕವಾಗಿರಿಸಲಾಗಿದೆ ಎಂದಿದ್ದಾರೆ. ಈ ಮಧ್ಯೆ, ಕೊರೋನಾ ಸೋಂಕು ತಡೆಗೆ ಸಂಬಂಧಿಸಿದಂತೆ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ವಿಶರ್ವಜಿತ್ ರಾಣೆ ಮಾಹಿತಿ ನೀಡಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ತಪಾಸಣಾ ಕೇಂದ್ರಗಳ ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ರಾಜ್ಯದ ವೈದ್ಯರ ತಂಡ ಸೋಂಕು ಹರಡುವುದನ್ನು ತಡೆಯಲು ಎಲ್ಲಾ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ.