ಫ್ಲಾರೆನ್ಸ್ ನೈಟಿಂಗೇಲ್ ಸೇವೆ ಅನನ್ಯ: ಡಾ. ನರಸನ್ನವರ್
ಹುಕ್ಕೇರಿ 12: ತಾಲೂಕ ಆಸ್ಪತ್ರೆಯಲ್ಲಿ ಫ್ಲಾರೆನ್ಸ್ ನೈಟಿಂಗೇಲ್ - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ. ಜನನ ಇಟಲಿಯಲ್ಲಿ 1820ರ ಮೇ 12 ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ, ತಮ್ಮ 17ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು. ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು. 1854ರ ಅಕ್ಟೋಬರ್ 21ರಂದು ತಮ್ಮ 38 ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.
ಮಿಲಿಟರಿ ಆಸ್ಪತ್ರೆಗಳ ಹಾಗೂ ಇತರ ಆಸ್ಪತ್ರೆಗಳ ಸುಧಾರಣೆಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿದಳು. ಇದಕ್ಕಾಗಿ ತನ್ನ ಜೀವಮಾನವನ್ನೇ ಮುಡಿಪಾಗಿಟ್ಟಳು. ಇಂದಿಗೂ ಈಕೆ ರೂಪಿಸಿದ ಸುಧಾರಣಾ ಕ್ರಮಗಳನ್ನು ಜಗತ್ತಿನ ಎಲ್ಲ ಆಸ್ಪತ್ರೆಗಳೂ ಒಂದಲ್ಲ ಒಂದು ರೀತಿಯಲ್ಲಿ ಅನುಸರಿಸುತ್ತಿವೆ. ಈ ’ದೀಪ ಧಾರಿಣಿ’ ಇಟಲಿಯ ಫ್ಲಾರೆನ್ಸ್ ನಗರದಲ್ಲಿ ಹುಟ್ಟಿದ ಪ್ಲಾರೆನ್ಸ್ ನೈಟಿಂಗೇಲ್. ಇವರ ನೆನಪಿಗಾಗಿ ಲಂಡನ್ನ ವಾಟರ್ಲೂ ಅರಮನೆಯಲ್ಲಿ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ. ತನ್ನ ಸಮಸ್ತ ಪ್ರತಿಷ್ಠೆ ಗೌರವ ಸಿರಿತನ ಹಾಗೂ ತನ್ನ ವೈಯಕ್ತಿಕ ಸುಖ ಸಂತೋಷವನ್ನು ಧಾರೆಯೆರೆದು ಇಂಗ್ಲೆಂಡಿನ ಹೈಸರ್ವರ್ಥ್ ನಗರದ ಲೂಥರನ್ ಆಸ್ಪತ್ರೆಯಲ್ಲಿ ದಾದಿಯರ ಶುಶ್ರೂಷೆ ಶಿಕ್ಷಣ ಶಾಲೆಗೆ ವಿದ್ಯಾರ್ಥಿನಿಯಾಗಿ ಸೇರೆ್ಡಗೊಂಡಳು.
ಈ ಸಂದರ್ಭದಲ್ಲಿ ಡಾಕ್ಟರ್ ಎಂ ಎಂ ನರಸನ್ನವರ್. ಡಾಕ್ಟರ್ ಎಂ ಸಿ ವಿಜಯಪುರೆ. ಡಾಕ್ಟರ್ ಆರ್ ವೈ ಮಕಾಂದಾರ. ಡಾಕ್ಟರ್ ಪ್ರಗತಿ ಬೋರಗಾಂವ ಅಂಜಿನಾ ಮಾಳೆ. ವಿಜಯ್ ಕುಮಾರ್ ಕುಂಬಾರ. ಶ್ರೀದೇವಿ ಶಿರ್ಪನವರ. ಸಂತೋಷ್ ಕಟಗೇರಿ. ಹನುಮಂತ ಗೌಡರ. ಶ್ರೀಮತಿ ಸರಸ್ವತಿ ದೊಡ್ಡಭಂಗಿ. ಹಾಗೂ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ವರ್ಗದವರು ಸ್ಥಳೀಯ ಜನರು ಉಪಸ್ಥಿತರಿದ್ದರು