ಅರಣ್ಯ ಸಂಪತ್ತು ಉಳಿವಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ಅನನ್ಯ : ಜಿಲ್ಲಾಧಿಕಾರಿ ನಕುಲ್

ಬಳ್ಳಾರಿ,ಸೆ.11: ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾಡು ಮೇಡು ಗುಡ್ಡಬೆಟ್ಟ ಪ್ರದೇಶಗಳಲ್ಲಿ ಜೀವದ ಹಂಗನ್ನು ತೊರೆದು ಅರಣ್ಯ ಮತ್ತು ವನ್ಯಜೀವಿಗಳ ಸಂಪತ್ತಿನ ಉಳುವಿಗಾಗಿ ಶ್ರಮವಹಿಸಿ ದುಡಿಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.

ಅರಣ್ಯ ಇಲಾಖೆ ವತಿಯಿಂದ ಅರಣ್ಯ ಹುತಾತ್ಮರ ದಿನಾಚರಣೆ ನಿಮಿತ್ತ ನಗರದ ಪ್ರಾಣಿಸಂಗ್ರಹಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಅರಣ್ಯ ಸಂಪತ್ತು ಉಳಿಸುವ ಕಾರ್ಯದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಅರ್ಪಿಸಿ ನಮನ ಸಲ್ಲಿಸಿ ಅವರು ಮಾತನಾಡಿದರು.

 ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇವರುಗಳಿಗೆ ಎಲ್ಲರು ಒತ್ತಾಸೆಯಾಗಿ ನಿಂತು ಧೈರ್ಯ ಮತ್ತು ಸಹಕಾರವನ್ನು ನೀಡಬೇಕು ಎಂದು ಅವರು ಮನವಿ ಮಾಡಿದರು.

ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾದೀಶರಾದ ಪಿ.ಟಿ.ಕಟ್ಟಿಮನಿ ಅವರು ಮಾತನಾಡಿ ಅರಣ್ಯ ಇಲಾಖೆ ಅಧಿಕಾರಿ / ಸಿಬ್ಬಂದಿಗಳು ದುರ್ಗಮವಾದ ಅರಣ್ಯ ಪ್ರದೇಶಗಳಲ್ಲಿ ಕಾರ್ಯ ನವರ್ಿಹಿಸುತ್ತಿದ್ದು, ತಮ್ಮ ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುತ್ತಿರುವುದನ್ನು ನಾನು ಖುದ್ದು ಅರಣ್ಯಕ್ಕೆ ಭೇಟಿ ನಿಡಿದ ಸಂದರ್ಭದಲ್ಲಿ ಗಮನಿಸಿರುತ್ತೇನೆ ಎಂದರು.

ಹೆಗ್ಗಡದೇವನ ಕೋಟೆ ಅರಣ್ಯ ಭಾಗದಲ್ಲಿ ನಾನು ಸಂಚರಿಸಿದ ಸಂದರ್ಭದಲ್ಲಿ  ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಮತ್ತು ವನ್ಯಜೀವಿಗೊಳಡನೆ ಭಾಂಧವ್ಯವನ್ನು ಹೊಂದಿ ಉತ್ತಮ ಕೆಲಸ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯಕತೆ ಇದೆ ಎಂದು ಹೇಳಿದ ಅವರು, ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ತುಂಬು ಹೃದಯದಿಂದ ಶ್ಲಾಘಿಸಿದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ಲಿಂಗರಾಜು ಅವರು ಮಾತನಾಡಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು ದೂರದ ಅರಣ್ಯ ಪ್ರದೇಶದೊಳಗೆ ಕಾರ್ಯನಿರ್ವಹಿಸುತ್ತಿದ್ದು, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತಮವಾದ ಅನುಕೂಲವಾದ ಶೈಕ್ಷಣಿಕ ಸೌಲಭ್ಯವಿಲ್ಲದೆ ವಂಚಿತರಾಗುತ್ತಿದ್ದಾರೆ ಎಂದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಮಾಡುವಾಗ ಅವರಲ್ಲಿ ಆಧುನಿಕ ಮಾದರಿಯ ಶಸ್ತ್ರಾಸ್ತ್ರ ಇಲ್ಲದೆ ಸಿಬ್ಬಂದಿಗಳು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವುದು ಮತ್ತು ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ರಕ್ಷಣೆ ಮಾಡುವುದು ತುಂಬ ಕಷ್ಟಕರವಾಗಿರುತ್ತದೆ. ಇಲಾಖೆಯ ಸಿಬ್ಬಂದಿಗಳಿಗೆ ಹೆಚ್ಚಿನ ಪ್ರೋತ್ಸಾಹ ಮತ್ತು ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮತ್ತು ಶಸ್ತ್ರಾಸ್ತ್ರವನ್ನು ಪೂರೈಕೆ ಮಾಡಿ ಉತ್ತಮವಾಗಿ ದೈರ್ಯದಿಂದ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಕಳೆದ 52 ವರ್ಷಗಳಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದವರ 47 ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.  

ಈ ಸಂದರ್ಭದಲ್ಲಿ ಉಪಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ. ರಮೇಶಕುಮಾರ, ಡಾ.ಮಾಲತಿ ಪ್ರಿಯಾ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.