ದೇವರಹಿಪ್ಪರಗಿ 25: ನಮ್ಮ ನಡೆ ಆರೋಗ್ಯದ ಕಡೆ, ಸದೃಢ ದೇಹ ಸಮೃದ್ಧ ಸಮಾಜ ನಿರ್ಮಾಣಕ್ಕಾಗಿ ವಿಜಯಪುರದ ಬಿ ಎಲ್ ಡಿ ಈ ಸಂಸ್ಥೆಯ ಬಿ ಎಮ್ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ಸರ್ವರೋಗ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕ್ಷೇತ್ರದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ ಕರೆ ನೀಡಿದರು.ಪಟ್ಟಣದಲ್ಲಿ ರವಿವಾರದಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತಕ್ಷೇತ್ರದ ಚಬನೂರ ಗ್ರಾಮದಲ್ಲಿ ದಿ.27.5.2025ರ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯ ವರೆಗೆ ಗ್ರಾಮದ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ.ಇಂದಿನ ದುಬಾರಿ ವೆಚ್ಚಗಳ ಕಾಲದಲ್ಲಿ ಬಡ ಮತ್ತು ಮಧ್ಯಮ ವರ್ಗದವರು ಅನೇಕ ರೋಗಗಳಿಗೆ ಚಿಕಿತ್ಸೆ ಕೊಡಿಸಲಾಗದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿ ಎಲ್ ಡಿ ಈ ಸಂಸ್ಥೆಯ ಶ್ರೀ ಬಿ ಎಮ್ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ಸರ್ವರೋಗ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಯಾವ ರೋಗಗಳಿಗೆ ಎಲ್ಲಿ, ಯಾರ ಹತ್ತಿರ ತೋರಿಸಬೇಕು ಎಂಬುದನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಉಚಿತವಾಗಿ ಓಷಧಿ, ವಿವಿಧ ರೋಗಗಳಿಗೆ ಉಚಿತವಾಗಿ ಸೂಕ್ತ ಚಿಕಿತ್ಸೆ ಒದಗಿಸಲಾಗುವುದು. ಉತ್ತರ ಕರ್ನಾಟಕದಲ್ಲಿ ಹಲವಾರು ಉಚಿತ ಶಿಬಿರಗಳನ್ನು ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಸಂಸ್ಥೆಯಿಂದ ಅನುಕೂಲ ಕಲ್ಪಿಸಲಾಗಿದೆ. ಈ ಬಾರಿ ಕ್ಷೇತ್ರದಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದರ ಜೊತೆ ನಮ್ಮ ನಡೆ ಆರೋಗ್ಯದ ಕಡೆ, ಸದೃಢ ದೇಹ ಸಮೃದ್ಧ ಸಮಾಜ ಎಂಬ ಧ್ಯೇಯ ವಾಕ್ಯದೊಂದಿಗೆ ಗ್ರಾಮದಲ್ಲಿ ಬೃಹತ್ ಸರ್ವ ರೋಗ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ ವಿವಿಧ ವಿಭಾಗದ ತಜ್ಞ ವೈದ್ಯರು ಭಾಗವಹಿಸಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.