ಬೆಂಗಳೂರು, ಜೂ.29 ; ಕೋವಿಡ್ ನಿಯಂತ್ರಣ ತಂಡಕ್ಕೆ ಇನ್ನಷ್ಟು ತಜ್ಞ ವೈದ್ಯರ ನೇಮಕ ಮಾಡಲಾಗುವುದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ದಾಖಲಾಗಲು ಆಗಮಿಸಿದರೆ ಪ್ರವೇಶ ನಿರಾಕರಿಸಬಾರದು, ಸೋಂಕು ಪತ್ತೆ ಪರೀಕ್ಷೆಯ ವರದಿಯನ್ನು ಮೊದಲು ಸರ್ಕಾರಕ್ಕೆ ತಿಳಿಸಬೇಕು, ಬೇರಾರಿಗೂ ಮಾಹಿತಿ ಬಹಿರಂಗಪಡಿಸುವಂತಿಲ್ಲ, ಸರ್ಕಾರದ ಆರೋಗ್ಯಾಧಿಕಾರಿ ಮಾಹಿತಿ ಬಿಡುಗಡೆ ಮಾಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಹಾಗೂ ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವೈರಾಣು ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಜುಲೈ 7ರ ನಂತರ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಚಿಂತನೆ ಇದೆ.
ರಾಜ್ಯದಲ್ಲಿ ವೈರಾಣು ಸೋಂಕು ಪರಿಸ್ಥಿತಿ ಇನ್ನೂ ಆರು ತಿಂಗಳು ಇದೇ ರೀತಿ ಮುಂದುವರಿಯುವ ಸಾಧ್ಯತೆ ಕಂಡುಬರುತ್ತಿದೆ ಎಂದು ಹೇಳಿದರು.ರಾಜ್ಯದಲ್ಲಿ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಇಲ್ಲ.ಬೆಂಗಳೂರು ನಗರದ ಉದ್ಯಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ತರುವ ಆಲೋಚನೆ ಇದೆ ಎಂದು ಆರ್. ಅಶೋಕ ತಿಳಿಸಿದರು.ಅವ್ಯವಸ್ಥೆಯ ದೂರು ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ, ಹಜ್ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ವೈದ್ಯಕೀಯ ಸಿಬ್ಬಂದಿ ಆರು ತಿಂಗಳ ಕಾಲ ಕೆಲಸ ಮಾಡಲು ಮಾನಸಿಕವಾಗಿ ಸಿದ್ಧವಾಗಬೇಕು ಎಂದು ಸೂಚನೆ ನೀಡಲಾಗಿದೆ. ವೈದ್ಯರ ಅಗತ್ಯ ಕೂಡ ಹೆಚ್ಚಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಗಳನ್ನು ನೇಮಿಸುವಂತೆ ಸೂಚಿಸಲಾಗಿದೆ ಎಂದರು.
ಕೆಲವು ಕಡೆ ಹೋಟೆಲ್ ಗಳಲ್ಲಿ ವೈದ್ಯರ ಮೇಲೆ ಗಲಾಟೆ ಮಾಡಿದ್ದಾರೆಗೃಹ ಸಚಿವರ ಜೊತೆ ಮಾತನಾಡಿ ವೈದ್ಯರಿಗೆ ಸೂಕ್ತ ರಕ್ಷಣೆ ಕೊಡಬೇಕು ಮುಂದೆ ಇಂತಹ ಪ್ರಕರಣ ವರದಿಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಲಾಗಿದೆ ಎಂದರು.ಡಾಕ್ಟರ್ ಗಳು ವಾರ್ಡ್ ಗಳಿಗೆ ಹೋಗುವುದಿಲ್ಲ ಅಂತ ದೂರು ಬಂದಿದೆ. ಪ್ಯಾರಾಮೆಡಿಕಲ್ ಸ್ಟಿಕರ್ ಗಳನ್ನು ಹಾಕಿಕೊಂಡು ಹೋಗಬೇಕು. ಕೆಲವು ಕಡೆ ಹೋಟೆಲ್ ಗಳಲ್ಲಿ ವೈದ್ಯರ ಮೇಲೆ ಗಲಾಟೆ ಮಾಡಿದ್ದಾರೆ. ವಿಕ್ಟೋರಿಯಾದಲ್ಲಿ ಎಲ್ಲಾ ಬೆಡ್ ಗಳಿಗೆ ನಂಬರಿಂಗ್ ಮಾಡಲಾಗಿದೆ ಎಂದರು.ಕೆಲವು ಕಡೆ ಹೋಟೆಲ್ ಗಳಲ್ಲಿ ವೈದ್ಯರ ಮೇಲೆ ಗಲಾಟೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಗೃಹ ಸಚಿವರ ಜೊತೆ ಮಾತನಾಡಿ ವೈದ್ಯರಿಗೆ ಸೂಕ್ತ ರಕ್ಷಣೆ ಕೊಡುವಂತೆ ಹೇಳಿರುವುದಾಗಿ ಸಚಿವರು ಹೇಳಿದರು. ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಸಂಸದ ಪಿ.ಸಿ ಮೋಹನ್ ಉಪಸ್ಥಿತರಿದ್ದರು.