ದ್ವೀತಿಯ ಪಿಯು ಪರೀಕ್ಷೆಪರೀಕ್ಷಾ ಕೇಂದ್ರಗಳಿಗೆ ಜಿ.ಪಂ.ಸಿಇಓ ರಿಷಿ ಆನಂದ ಭೇಟಿ : ಪರೀಶೀಲನೆ

G.P.CEO Rishi Ananda Visits PU Examination Centers in Dwiti: Inspection

ದ್ವೀತಿಯ ಪಿಯು ಪರೀಕ್ಷೆಪರೀಕ್ಷಾ ಕೇಂದ್ರಗಳಿಗೆ ಜಿ.ಪಂ.ಸಿಇಓ ರಿಷಿ ಆನಂದ ಭೇಟಿ : ಪರೀಶೀಲನೆ 

ವಿಜಯಪುರ 01 : ವಿಜಯಪುರ ನಗರದ ಬಾಲಕರ ಹಾಗೂ ಬಾಲಕಿಯರ ಪದವಿಪೂರ್ವ ಕಾಲೇಜ್ ಮತ್ತು ಸಿಕ್ಯಾಬ್ ಮಹಿಳಾ ಪದವಿಪೂರ್ವ ಕಾಲೇಜ್ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಶನಿವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು. 

ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ಆಸನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಸೇರಿದಂತೆ ಪರೀಕ್ಷ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳು ಹಾಗೂ ಭದ್ರತಾ ವ್ಯವಸ್ಥೆ ಕುರಿತು ಪರೀಶೀಲನೆ ನಡೆಸಿದರು.  

ವೆಬ್‌ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ : ಪರೀಕ್ಷಾ ಕೇಂದ್ರದ ಮೇಲೆ ನಿಗಾ ಇರಿಸಲು ಜಿಲ್ಲಾ ಪಂಚಾಯತಿಯ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ವ್ಯವಸ್ಥಿತ ನಿರ್ವಹಣೆ ಕುರಿತು ಪರೀಶೀಲನೆ ನಡೆಸಿದರು.