ಗದಗ 05: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿಂದು ಡಾ. ಬಾಬು ಜಗಜೀವನರಾಂ ರವರ 112ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ಸಮಪರ್ಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶ್ರೀನಾಥ ಜೋಶಿ, ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.