ಸರ್ಕಾರಿ ನೌಕರರ ಕ್ರೀಡಾಕೂಟ ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆ
ಹೂವಿನ ಹಡಗಲಿ 21: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಶಿಕ್ಷಕರು ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ತಾಲೂಕಿನ ಸರಕಾರಿ ಪ್ರೌಢಶಾಲೆ (ಆರ್ ಎಂ ಎಸ್ ಎ )ತಿಮಲಾಪುರ್ 63 (ಅಲ್ಲಿಪುರ )ಶಾಲೆಯ ಇಬ್ಬರು ಶಿಕ್ಷಕರು ಮತ್ತು ಒಬ್ಬ ಶಿಕ್ಷಕಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕನ್ನಡ ಭಾಷಾ ಶಿಕ್ಷಕಿ ರೇಣುಕಾ ಶರಾಫ ಸಾಂಸ್ಕೃತಿಕ ಸ್ಪರ್ಧೆಗಳಾದ ಜನಪದ ಗೀತೆ,ಲಘು ಶಾಸ್ತ್ರಿಯ ಸಂಗೀತ ಹಾಗೂ ಹಿಂದುಸ್ತಾನಿ ಗಾಯನ ಈ ಮೂರು ವಿಭಾಗಗಳಲ್ಲಿಯೂ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇಂಗ್ಲೀಷ್ ವಿಷಯದ ಶಿಕ್ಷಕರಾದ ನಾಗಪ್ಪ ಪೂಜಾರ್ ರವರು 45 ವಯೋಮಾನದ ಒಳಗಿನವರ ಬ್ಯಾಕ್ ಸ್ಟ್ರೋಕ್ 200 ಮೀಟರ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿಂದಿ ವಿಷಯದ ಶಿಕ್ಷಕರಾದ ಸಣ್ಣ ಹಾಲೇಶ ಈಟಿ ರವರು 110 ಮೀಟರ್ ಹರ್ಡಲ್ಸ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟವನ್ನು ಪ್ರತಿನಿಧಿಸುತ್ತಿದ್ದಾರೆ. ಅಭಿನಂದನೆ : ಶಿಕ್ಷಕರ ಸಾಧನೆಗೆ ರಾಜ್ಯ ಸರಕಾರಿ ನೌಕರರ ಸಂಘದ ಅದ್ಯಕ್ಷ ಕೊಟ್ರಗೌಡ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.