ಬೆಂಗಳೂರು, ಮೇ 18,ರಾಜ್ಯದಲ್ಲಿ ಜಿಮ್, ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅವಕಾಶ ಕೊಡುವಂತೆ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳು, ಆಟೋ ರಿಕ್ಷಾ, ಕ್ಯಾಬ್ ಚಾಲಕರ ನೋಂದಣಿ ಗೊಂದಲ ತಕ್ಷಣ ಬಗೆಹರಿಸಬೇಕು. ಇವರೆಲ್ಲ ಬದುಕಿದ್ದಾಗಲೇ ಮಾಸಿಕ 10,000 ರುಪಾಯಿ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.