ಬೆಂಗಳೂರು, ಏ.22,ರಸ್ತೆ ಅಪಘಾತದಲ್ಲಿ ಮಂಗಳವಾರ ಸಾವನ್ನಪ್ಪಿದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂ. ಚೆಕ್ ವಿತರಿಸಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರು ಹಾಗೂ ಹನುಮಂತು ಪತ್ನಿಗೆ ಅವರು ಧೈರ್ಯ ತುಂಬಿದರು.