ಮುಂಡಗೋಡ 22: ಕೆಎಸ್‌ಆರ್ಟಿಸಿ ಹಾಗೂ ವಿ ಆರ್ ಎಲ್ ಖಾಸಗಿ ಬಸ್ಸು ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಪುರ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕಾತೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಿಪುರ ಗ್ರಾಮದಲ್ಲಿ ಹುಬ್ಬಳ್ಳಿ ಕಡೆಯಿಂದ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ವಿ ಆರ್ ಎಲ್ ಬಸ್ ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಎರಡು ಬಸ್ಸ ನ ಚಾಲಕರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗಾಯಗಳಾಗಿದ್ದು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗಿದೆ. ಮುಂಡಗೋಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.