ಸಮೀಕ್ಷಾದಾರರಿಂದ ಮನೆ ಮನೆ ಭೇಟಿ ಸಮೀಕ್ಷೆ ಅವಧಿ ಮೇ 25 ರವರೆಗೆ ವಿಸ್ತರಣೆ

House-to-house survey period extended by surveyors until May 25

ಸಮೀಕ್ಷಾದಾರರಿಂದ ಮನೆ ಮನೆ ಭೇಟಿ ಸಮೀಕ್ಷೆ ಅವಧಿ ಮೇ 25 ರವರೆಗೆ ವಿಸ್ತರಣೆ

ಗದಗ  19:  ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಕುರಿತಂತೆ ಸಮೀಕ್ಷಾದಾರರಿಂದ ಮನೆ ಮನೆ ಭೇಟಿ ಸಮೀಕ್ಷೆಯನ್ನು ಮೇ 25ರವರೆಗೆ ವಿಸ್ತರಿಸಲಾಗಿದ್ದು ಸಮೀಕ್ಷೆದಾರರಿಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ಜಿಲ್ಲಾದಿಕಾರಿ ಸಿ.ಎನ್‌. ಶ್ರೀಧರ್ ತಿಳಿಸಿದರು.    

ನಗರದ ಜಿಲ್ಲಾಡಳಿತ ಭವನದ  ಆಡಿಟೋರಿಯಂ ಹಾಲ್‌ದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.     

ಮನೆ ಮನೆಯ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ಒದಗಿಸದೇ ಇದ್ದಲ್ಲಿ ಮೇ 26, 27, 28 ರಂದು ವಿಶೇಷ ಶಿಬಿರಗಳಲ್ಲಿ ಮಾಹಿತಿ ನೀಡಲು ಅವಕಾಶವಿದೆ. ನಿಮ್ಮ ವ್ಯಾಪ್ತಿಯ ಮತಗಟ್ಟೆಯಲ್ಲಿ ತಮ್ಮ ಆಧಾರ ಕಾರ್ಡ ಹಾಗೂ ರೇಷನ್ ಕಾರ್ಡನೊಂದಿಗೆ ಮಾಹಿತಿ ನೀಡಬೇಕು. ಸರ್ಕಾರದ ಸೌಲಭ್ಯಗಳು ಪರಿಶಿಷ್ಟ ಜಾತಿಯ ಒಳಪಂಗಡಗಳಿಗೆ ಸಮಾನವಾಗಿ ತಲುಪಬೇಕು ಎನ್ನುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.   

ಇದೊಂದು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ  ಎಂದರು.  

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 ಕುರಿತಂತೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಣಣಠಿ:/ಛಿಜಜಣಟಜಛಿಛಿಣಣಡಿತಜಥಿ.ಞಚಿಡಿಟಿಚಿಣಚಿಞಚಿ.ರಠ.ಟಿಜಟಜಿಜಜಛಿಟಚಿಡಿಚಿಣಠ   ವೆಬ್‌ಸೈಟ್ ವಿಳಾಸದಲ್ಲಿ ಮೇ 19 ರಿಂದ 28 ರವರೆಗೆ ಮರು ನಿಗದಿ ಪಡಿಸಲಾಗಿದೆ. ಈ ಕುರಿತು ನಗರಸಭೆ ಹಾಗೂ ಕಸ ವಿಲೇವಾರಿ ವಾಹನದಲ್ಲಿ ಧ್ವನಿವರ್ಧಕದ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಮತ್ತು  ಪೊಲೀಸ ಠಾಣೆಗಳಲ್ಲಿ ಈ ಕುರಿತು  ಪ್ರಚಾರ ಕೈಗೊಳ್ಳಲು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ ತಿಳಿಸಿದರು.  

  

ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಕುರಿತ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.  

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ ಮನೆ ಮನೆಯ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಮೂಲಕ  ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ವಿವರಕ್ಕೆ ಸಹಾಯವಾಣಿ ಸಂಖ್ಯೆ 9481359000 ಸಂಪರ್ಕಿಸಬಹುದಾಗಿದೆ ಎಂದು ಸಭೆಗೆ ತಿಳಿಸಿದರು.  

ಸಭೆಯಲ್ಲಿ ಗಣತಿದಾರರಿಗೆ ಸರಿಯಾಗಿ ಮಾಹಿತಿ ಇಂಧೀಕರಿಸುವ ಕುರಿತು ಇರುವ ಗೊಂದಲಗಳ ಬಗ್ಗೆ ಹಾಗೂ ಸಮೀಕ್ಷೆ ಗೆ ಒಳಪಡುವ ಕುಟುಂಬಗಳು ನೀಡುವ ಮಾಹಿತಿಯನ್ನು ಸರಿಯಾಗಿ ನಮೂದಿಸುವ ಕುರಿತು ಅಲ್ಲದೇ ಬೇಡ ಜಂಗಮ ಪ್ರಮಾಣ ಪತ್ರ ಪಡೆಯದವರು ಸಮೀಕ್ಷಾ ಸಂದರ್ಭದಲ್ಲಿ ಜಾತಿ ನಮೂದಿಸುವ ಕುರಿತು ಇರುವ ಗೊಂದಲಗಳ ಬಗ್ಗೆ  ಸಮಾಜದ ಮುಖಂಡರುಗಳು ಸಭೆಯ ಗಮನಕ್ಕೆ ತಂದರು. ಒಟ್ಟಾರೆ ಸಮೀಕ್ಷೆ ಸರಿಯಾಗಿ ಆಗಬೇಕು ಎಂಬ ಒಕ್ಕೊರಲ ಬೇಡಿಕೆ ಸಮಾಜದ ಮುಖಂಡರಿಂದ ವ್ಯಕ್ತವಾಯಿತು.  ಮಾದಿಗ, ಮಾದಾರ , ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿಗಳ ನಮೂದಿಸುವ ಕುರಿತಂತೆಯೂ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಯಿತು.   

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಡಿವೈಎಸ್‌ಪಿ ಮಹಾಂತೇಶ ಸಜ್ಜನ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್‌.ಎಸ್‌.ಬುರುಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,  ಸಮುದಾಯದವರು ಪಾಲ್ಗೊಂಡಿದ್ದ್ದರು.