ಹೆಣ್ಣು ಮಕ್ಕಳ ರಕ್ಷಣೆ, ಶಿಕ್ಷಣಕ್ಕಾಗಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿ: ಗರಗ

ಹಾವೇರಿ:  ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣಕ್ಕಾಗಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಗೊಳಿಸಲಾಗಿದೆ ಎಂದು  ಸಿವಿಲ್ ನ್ಯಾಯಾಧೀಶರಾದ  ಲಕ್ಷ್ಮೀ ಎನ್. ಗರಗ ಅವರು ಹೇಳಿದರು.

ನಗರದ ಎಮ್.ಆರ್.ಎಮ್. ಪಿ.ಯು.ಕಾಲೇಜ್ನಲ್ಲಿ ಮಂಗಳವಾರ ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಎಮ್.ಆರ್.ಎಮ್. ಪಿ.ಯು. ಕಾಲೇಜ್ ಹಾಗೂ ಸರ್ಕಾರೇತರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ  ಜರುಗಿದ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ(ಬೇಟಿ ಬಚಾವೋ ಬೇಟಿ ಪಢಾವೋ) ಯೋಜನೆಯ ಕುರಿತು ಕಾನೂನು ಅರಿವು ಹಾಗೂ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ತರಗತಿಗಳಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

 ಹೆಣ್ಣು ಮಗುವನ್ನು ರಕ್ಷಿಸಲು 2015ರಲ್ಲಿ ಕೇಂದ್ರ ಸಕರ್ಾರದಿಂದ ಭೇಟಿ ಬಚಾವೋ ಭೇಟಿ ಪಡಾವೋ ಯೋಜನೆಯನ್ನು ಜಾರಿಗೆ ತರಲಾಗಿದೆ. ಕ್ಷೀಣಿಸುತ್ತಿರುವ ಹೆಣ್ಣುಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವುದು ಹೆಣ್ಣು ಮಗುವಿನ ರಕ್ಷಣೆ ಮಾಡುವುದು,  ಅವರಿಗೆ ಶಿಕ್ಷಣ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು, ಭ್ರೂಣ ಹಂತದಲ್ಲೇ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದರೆ ಕಾನೂನಿನ ತಿಳುವಳಿಕೆ ಹಾಗೂ ಜ್ಞಾನ ಹೆಚ್ಚಾಗುತ್ತದೆ. ಇದರಿಂದ ಅವಳ ಮೇಲೆ ನಡೆಯುವ ದೌರ್ಜನ್ಯ, ಅನ್ಯಾಯಗಳ ವಿರುದ್ಧ  ಹೋರಾಡಲು ಶಕ್ತಿ ಬರುತ್ತದೆ ಎಂದು ಹೇಳಿದರು.

 ಸಮಾರಂಭದ ಅಧ್ಯಕ್ಷತೆ  ವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಧನ ಚೆಕ್ ವಿತರಣೆ ಮಾತನಾಡಿದ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರು ಗರ್ಭಪಾತ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ನೈಸಗರ್ಿಕವಾಗಿ ಯಾವುದೇ ಮಗು ಜನಿಸಿದರೂ ಕೂಡಾ ಪಾಲಕರು ಮಗುವನ್ನು ಒಪ್ಪಿಕೊಳ್ಳಬೇಕು. ನಮ್ಮ ದೇಶದಲ್ಲಿ ಹೆಣ್ಣಿಗೆ ಪೂಜ್ಯಸ್ಥಾನವಿದೆ. ಆದರೆ ಲಿಂಗಾನುಪಾತ ನೋಡಿದಾಗ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಪ್ರಮಾಣದಲ್ಲಿರುವುದು ವಿಷಾಧನೀಯ. ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ರಕ್ಷಿಸಿ ಬೆಳೆಸಲು ಜಾಗೃತಿ ಅವಶ್ಯಕವಾಗಿದೆ. ಲಿಂಗದ ಆಧಾರದ ಮೇಲೆ ತಾರತಮ್ಯವಿಲ್ಲ. ಸಮಾಜದಲ್ಲಿ ಎಲ್ಲರೂ ಸಮಾನರು ಎಂದು ಅವರು ಹೇಳಿದರು. 

  ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಶ್ರೀವಿದ್ಯಾ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಕೆ.ಸಿ.ಪಾವಲಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷಾರದ ಎಸ್.ಎಚ್.ಮಜೀದ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕರಾದ ಎಸ್.ಸಿ.ಪೀರಜಾದೆ, ಶಹರ ಪೋಲಿಸ್ ಠಾಣೆಯ ಸಿಪಿಐ ಪ್ರಭಾವತಿ ಶೇತಸನದಿ ಮಾತನಾಡಿದರು.

 ಇದೇ ಸಂದರ್ಭದಲ್ಲಿ 2018-19 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ತರಗತಿಗಳಲ್ಲಿ ಅತಿಹೆಚ್ಚು ಅಂಕಪಡೆದ  ಜಿಲ್ಲೆಯ ವಿದ್ಯಾರ್ಥಿನಿಯರಿಗೆ ತಲಾ 5 ಸಾವಿರ ರೂ ಪ್ರೋತ್ಸಾಹಧನ ಚೆಕ್ನ್ನು ವಿತರಿಸಲಾಯಿತು.

  ಪ್ರಭಾರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಉಮಾ.ಕೆ.ಎಸ್ ಹಾಗೂ ಹಿರಿಯ ಸ್ತ್ರೀರೋಗ ತಜ್ಞರಾದ ಹಾಗೂ ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಆಯ್. ವಾಯ್.ಮಾಳೋದೆ ಉಪನ್ಯಾಸ ನೀಡಿದರು. 

 ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದಶರ್ಿ ಪಿ.ಎಂ ಬೆನ್ನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕರಾದ ಪಿ.ವಾಯ್. ಶೆಟ್ಟಪ್ಪನವರ, ಎಮ್.ಆರ್.ಎಮ್. ಪಿ.ಯು. ಕಾಲೇಜಿನ ಪ್ರಾಂಸುಪಾಲರಾದ ರಾಮ ಮೋಹನ ರಾವ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನೆಲ್ ವಕೀಲರಾದ ಶಶಿಧರ ದೇವಸೂರ, ಜಿಲ್ಲಾ ಪಂಚಾಯತ್ನ ಯೋಜನಾಧಿಕಾರಿ ಕುಮಾರ್ ಮಣ್ಣವಡ್ಡರ್ ಹಾಗೂ ವಿನಾಯಕ ಗುಡುಗೂರು ಇತರರು ಉಪಸ್ಥಿತರಿದ್ದರು.