ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ
ಗದಗ 13: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಗದಗ ಜಿಲ್ಲೆ ರೋಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಡಿಸೆಂಬರ್ 15 ರಂದು ಬೆ 11.30 ಗಂಟೆಗೆ ರೋಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಮಾನ್ಯ ಉಪ ಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರು (ಭಾರಿ ಮತ್ತು ಮಧ್ಯಮ) ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ , ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ , ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ , ಕಂದಾಯ ಸಚಿವ ಕೃಷ್ಣ ಭೈರೇಗೌಡ , ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ , ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ , ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ , ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ , ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ರುದ್ರ್ಪ ಪಾಟೀಲ್ , ಹಿಂದುಳಿದ ವರ್ಗಗಳು , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ , ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಶ್ರೀಮತಿ ಲಕ್ಷ್ಮೀ ಆರ್ ಹೆಬ್ಬಾಳ್ಕರ್ , ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರ್ಪ , ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರುಗಳು ವಹಿಸುವರು.
ಕರ್ನಾಟಕ ಖನಿಜ ಅಭಿವೃಧ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ , ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಸಲೀಂ ಅಹ್ಮದ್ , ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ , ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ, ಬಾಗಲಕೋಟಿ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ್, ನರಗುಂದ ಶಾಸಕ ಸಿ.ಸಿ.ಪಾಟೀಲ, ಅಥಣಿ ಶಾಸಕ ಲಕ್ಷ್ಮಣ ಸವದಿ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ರೋಣ ಪುರಸಭೆ ಅಧ್ಯಕ್ಷೆ ಶ್ರೀಮತಿ ಗೀತಾ ಎಂ.ಮಾಡಲಗೇರಿ ಅವರುಗಳು ಆಗಮಿಸುವರು.
ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಸಂಜಯ್ ಬಿ. ಶೆಟ್ಟೆಣ್ಣವರ , ಜಿಲ್ಲಾಧಿಕಾರಿ ಗೋವಿಂದರೆಡ್ಡಿ , ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಗದಗ ಜಿಲ್ಲೆ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 19689.87 ಲಕ್ಷ ರೂ. ವೆಚ್ಚದಲ್ಲಿ 16 ಕಾಮಗಾರಿಗಳಿಗೆ ( 11 ಶಂಕುಸ್ಥಾಪನೆ ಕಾಮಗಾರಿಗಳು ಮತ್ತು 5 ಉದ್ಘಾಟನೆ ಕಾಮಗಾರಿಗಳು ) ಚಾಲನೆ ನೀಡಲಾಗುತ್ತಿದೆ.
17929.11 ಲಕ್ಷ ರೂ. ವೆಚ್ಚದಲ್ಲಿ 11 ಶಂಕುಸ್ಥಾಪನೆ ಕಾಮಗಾರಿಗಳ ವಿವರ.
ನಗರಾಭಿವೃದ್ಧಿ ಇಲಾಖೆಯ ಅಮೃತ ಯೋಜನೆಯಡಿ ಅಂದಾಜು ಮೊತ್ತ 6798 ಲಕ್ಷ ರೂ. ವೆಚ್ಚದಡಿ ರೋಣ, ಗಜೇಂದ್ರಗಡ ಮತ್ತು ನರೇಗಲ್ಲ ಪಟ್ಟಣಗಳಿಗೆ ಕುಡಿಯುವ ನೀರು ಯೋಜನೆ, ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 5,000 ಲಕ್ಷ ರೂ. ವೆಚ್ಚದಡಿ ರೋಣ ಪಟ್ಟಣದಲ್ಲಿ ಜಿ.ಟಿ.ಟಿ.ಸಿ. ಕಾಲೇಜು ಕಟ್ಟಡ ನಿರ್ಮಾಣ, ಲೋಕೋಪಯೋಗಿ ಇಲಾಖೆಯಿಂದ 2,000 ಲಕ್ಷ ರೂ. ವೆಚ್ಚದಡಿ ಮುನವಳ್ಳಿ- ಕೋಟುಮಚಗಿ ರಾ.ಹೆ. 83 95.90 ಕಿ.ಮೀ ದಿಂದ 104.50 ಕಿ.ಮೀ ಹಾಗೂ 107.00 ರಿಂದ 110.00 ರವರೆಗೆ ರಸ್ತೆ ಸುಧಾರಣೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 995.00 ಲಕ್ಷ ರೂ. ವೆಚ್ಚದಡಿ ಜಕ್ಕಲಿ ಗ್ರಾಮದಲ್ಲಿ ಶ್ರೀ ಅಂದಾನಪ್ಪ ದೊಡ್ಡಮೇಟಿಯವರ ಸ್ಮಾರಕ ನಿರ್ಮಾಣ, ಕಂದಾಯ ಇಲಾಖೆಯಿಂದ 860 ಲಕ್ಷ ರೂ. ವೆಚ್ಚದಡಿ ಗಜೇಂದ್ರಗಡ ತಾಲೂಕು ಪ್ರಜಾ ಸೌಧ ಕಟ್ಟಡ ನಿರ್ಮಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 800 ಲಕ್ಷ ರೂ. ವೆಚ್ಚದಡಿ ರೋಣ ಪಟ್ಟಣದಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ಮತ್ತು ಬಾಲಕರ ವಸತಿ ನಿಲಯಗಳ ಕಟ್ಟಡ ನಿರ್ಮಾಣ ಮತ್ತು ಗಜೇಂದ್ರಗಡ ಹಾಗೂ ನರೇಗಲ್ ಪಟ್ಟಣಗಳಲ್ಲಿ 2 ವಸತಿ ನಿಲಯಗಳ ಪ್ರಾರಂಭೋತ್ಸವ , ಸಣ್ಣ ನೀರಾವರಿ ಇಲಾಖೆಯಿಂದ 650 ಲಕ್ಷ ರೂ. ವೆಚ್ಚದಡಿ ಡಂಬಳ, ಪೇಠಾಲೂರ ಮತ್ತು ಜಂತ್ಲಿ - ಶಿರೂರ ಗ್ರಾಮಗಳ ಕೆರೆ ಅಭಿವೃದ್ಧಿ ಹಾಗೂ ಸವಡಿ- ಹೊನ್ನಪುರ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ, ಜಲಸಂಪನ್ಮೂಲ ಇಲಾಖೆಯಿಂದ 395 ಲಕ್ಷ ರೂ. ವೆಚ್ಚದಡಿ ರೋಣ ಪಟ್ಟಣದಲ್ಲಿ ಪ್ರವಾಸಿ ಮಂದಿರ ಕಟ್ಟಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 287.30 ಲಕ್ಷ ರೂ. ವೆಚ್ಚದಡಿ ರೋಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿಗಳ ನಿರ್ಮಾಣ ಹಾಗೂ ಡಂಬಳ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 93.81 ಲಕ್ಷ ರೂ. ವೆಚ್ಚದಡಿ ಡಂಬಳದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ, ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂ. ವೆಚ್ಚದಡಿ ಜಿಗಳೂರು ಕೆರೆ ಪಕ್ಕದಲ್ಲಿ ಪ್ರವಾಸಿ ಉದ್ಯಾನವನ.
1760.76 ಲಕ್ಷ ರೂ.ವೆಚ್ಚದಡಿ 5 ಉದ್ಘಾಟನೆ ಕಾಮಗಾರಿಗಳ ವಿವರ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1,000 ಲಕ್ಷ ರೂ. ವೆಚ್ಚದಡಿ ಮೇವುಂಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ , ಗಜೇಂದ್ರಗಡದಲ್ಲಿ ವಸತಿ ನಿಲಯ ಹಾಗೂ ರೋಣ ಪಟ್ಟಣದಲ್ಲಿ ವಸತಿ ಶಾಲೆ ಪ್ರಾರಂಭೋತ್ಸವ , ಪೌರಾಡಳಿತ ಇಲಾಖೆಯಿಂದ 392,01 ಲಕ್ಷ ರೂ.ವೆಚ್ಚದಡಿ ರೋಣ, ಗಜೇಂದ್ರಗಡ ಹಾಗೂ ನರೇಗಲ್ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ ಉದ್ಘಾಟನೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 250 ಲಕ್ಷ ರೂ. ವೆಚ್ಚದಡಿ ಹಿರೇವಡ್ಡಟ್ಟಿ ಗ್ರಾಮದಲ್ಲಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಟ್ಟಡ , ಆರೋಗ್ಯ ಇಲಾಖೆಯಿಂದ 91.75 ಲಕ್ಷ ರೂ. ವೆಚ್ಚದಡಿ ಸವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿ ಗೃಹ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾ. ಇಲಾಖೆಯಿಂದ 27 ಲಕ್ಷ ರೂ. ವೆಚ್ಚದಡಿ ಅಬ್ಬಿಗೇರಿ ಸಾರ್ವಜನಿಕ ಗ್ರಂಥಾಲಯ.