ಬ್ಯಾಡಗಿ 10 : ಆರೋಗ್ಯ ಕ್ಷೇತ್ರದಲ್ಲಿ ಅಗಾಧವಾದ ಬದಲಾವಣೆಗಳಾಗಿದ್ದರೂ ಸಾಕಷ್ಟು ಮಂದಿಯಲ್ಲಿ ರಕ್ತದಾನ ಕುರಿತು ಇನ್ನೂ ಸಹ ಮೂಢನಂಬಿಕೆ, ತಪ್ಪು ಕಲ್ಪನೆಗಳಿವೆ ಎಂದು ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕಡ್ಡಿಪುಡಿ ಅಭಿಪ್ರಾಯಪಟ್ಟರು.
ಪಟ್ಟಣದ ಹಂಸಭಾವಿ ರಸ್ತೆಯಲ್ಲಿ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ರಕ್ತ ಕೇಂದ್ರ ಹಾಗೂ ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಆಶ್ರಯದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನಕ್ಕಿಂತ ಮಿಗಿಲಾದ ದಾನವಿಲ್ಲ ಈ ಮುಂಚೆ ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ ಇನ್ನಿತರೆ ಅನೇಕ ತುರ್ತು ಸಂದರ್ಭಗಳಲ್ಲಿ ರಕ್ತದ ಅಲಭ್ಯತೆಯಿಂದಲೇ ಸಾಕಷ್ಟು ಮಂದಿ ಮೃತಪಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಕ್ತ ಲಭ್ಯವಾಗುವುದರಿಂದ ಸಾಯುವವರ ಸಂಖ್ಯೆ ಕಡಿಮೆಯಾಗಿದೆ ಎಂದರು. ಇತ್ತೀಚಿನ ವರ್ಷಗಳಲ್ಲಿ ರೆಡ್ಕ್ರಾಸ್ ಸೊಸೈಟಿ ಸೇರಿದಂತೆ ನಾನಾ ಸಂಘ ಸಂಸ್ಥೆಗಳು ರಕ್ತದಾನ ಶಿಬಿರ ಏರಿ್ಡಸಿ ರಕ್ತದಾನ ಕುರಿತು ಹೆಚ್ಚು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇದರಿಂದ ಬಹುತೇಕ ಮಂದಿ ರಕ್ತದಾನಕ್ಕೆ ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.ರೆಡ್ ಕ್ರಾಸ್ ಸಂಸ್ಥೆಯ ಸಂಯೋಜಕರಾದ ದೇವೇಂದ್ರ ಬಿ ಎನ್ ಮಾತನಾಡಿ ಮಾತನಾಡಿ ಈ ಹಿಂದೆ ವಿದ್ಯಾವಂತರೂ ಸಹ ರಕ್ತದಾನ ಎಂದರೆ ದೂರ ಉಳಿಯುತ್ತಿದ್ದರು. ರಕ್ತದಾನ ಕುರಿತು ಇದ್ದ ತಪ್ಪು ಕಲ್ಪನೆಗಳೇ ಅದಕ್ಕೆ ಕಾರಣ. ಇತ್ತೀಚಿನ ವರ್ಷಗಳಲ್ಲಿ ಗ್ರಾಪಂ ಮಟ್ಟದಲ್ಲೂ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಇದಕ್ಕೆಲ್ಲಾ ರೆಡ್ಕ್ರಾಸ್ ಸೊಸೈಟಿ, ಅಧಿಕಾರಿಗಳು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ವಿದ್ಯಾರ್ಥಿಗಳು ಹೆಚ್ಚು ರಕ್ತದಾನ ಮಾಡುವ ಮೂಲಕ ನೀವೂ ಆರೋಗ್ಯ ಕಾಪಾಡಿಕೊಳ್ಳಿ, ಇತರಿಗೆ ಜೀವದಾನ ಮಾಡಿ ಎಂದು ಕೋರಿದರು.ಪ್ರತಿ ವರ್ಷ ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡುತ್ತಾ ಬಂದಿದ್ದೇವೆ ಎಂದರು ಶಿಬಿರದಲ್ಲಿ ಒಟ್ಟು 31 ಜನರು ರಕ್ತದಾನ ಮಾಡಿದರು ಅದರಲ್ಲಿ ಕಾಲೇಜು ವಿದ್ಯಾರ್ಥಿಗಳು 20, ವಿದ್ಯಾರ್ಥಿನಿಯರು 6.ಸಿಬ್ಬಂದಿಗಳು 5 ರಕ್ತದಾನ ಮಾಡಿದರು.
ಈ ವೇಳೆ ಜಿಲ್ಲಾ ರಕ್ತ ಕೇಂದ್ರದ ಡಾ. ಬಸವರಾಜ್ ತಳವಾರ್ ಡಾ.ಕಮತದ ಕಾಲೇಜಿನ ಪ್ರೊಫೆಸರ್ ಗಳು.ಸಿಬ್ಬಂದಿಗಳು.ವಿಧ್ಯಾರ್ಥಿ.ವಿಧ್ಯಾರ್ಥಿನಿಯರು.ಹಾಗೂ ಎನ್ ಎಸ್ ಎಸ್ ಘಟಕದ ಸಂಯೋಜಕರು.ರೆಡ್ ಕ್ರಾಸ್ ಸಂಸ್ಥೆಯವರು ಉಪಸ್ಥಿತರಿದ್ದರು.