ಹಾವೇರಿ: ಅತಿವೃಷ್ಠಿ ಹಾಗೂ ಪ್ರವಾಹದಿಂದ ಜಿಲ್ಲೆಯ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯರು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಅತಿವೃಷ್ಟಿ ಬಾಧಿತ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಸಹಸ್ರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳೆಹಾನಿ, ಮನೆಗಳ ಕುಸಿತದಿಂದ ಜನ ಕಂಗಾಲಾಗಿದ್ದಾರೆ. ಜನರ ರಕ್ಷಣೆಗೆ ಅಧಿಕಾರಿಗಳು ತುತರ್ಾಗಿ ಸ್ಪಂದಿಸಬೇಕಾಗಿದೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಉಳಿದು ಜನರ ಸಮಸ್ಯೆಗೆ ಸ್ಪಂದಿಸಲು ಸೂಚನೆ ನೀಡಿದರು.
ತಾಲೂಕು ಪಂಚಾಯತಿ ಕಾರ್ಯ ನಿವರ್ಾಹಣಾಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮ ಸಹಾಯಕರು, ಪಿಡಿಓಗಳು ಸಮರ್ಪಕವಾಗಿ ಅತಿವೃಷ್ಠಿ ಬಾಧಿತ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಕುರಿತಂತೆ ಮೇಲ್ವಿಚಾರಣೆ ಮಾಡಬೇಕು. ನದಿ ಪಾತ್ರದಲ್ಲಿಬರುವ ಗ್ರಾಮಗಳ ಜನತೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಕರ್ಾರದ ಮಾರ್ಗಸೂಚಿಯಂತೆ ತಕ್ಷಣವೇ ಪರಿಹಾರ ವಿತರಣೆಗೆ ಕ್ರಮವಹಿಸಬೇಕು.
ಬೆಳೆಹಾನಿ ಕುರಿತಂತೆ ಕೃಷಿ, ತೋಟಗಾರಿಕೆ ಅಧಿಕಾರಿಗಳು ಸವರ್ೇನಡೆಸಿ ಬೆಳೆಹಾನಿ ಪರಿಹಾರ ಒದಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.
ರಸ್ತೆ, ಸೇತುವೆಗಳು ಹಾಳಾಗಿವೆ. ಮಳೆಯಿಂದ ಹಾಳಾದ ರಸ್ತೆಗಳನ್ನು ತುತರ್ಾಗಿ ದುರಸ್ಥಿಗೊಳಿಸಿ ವಾಹನ ಓಡಾಟಕ್ಕೆ ಅನುವುಮಾಡಿಕೊಡಬೇಕೆಂದು ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯತ್ ಇಂಜನೀಯರ್ಗಳಿಗೆ ಸೂಚನೆ ನೀಡಿದರು.
ಮಳೆಯಿಂದ ಹಾಳಾಗಿರುವ ಶಾಲಾ ಕೊಠಡಿ ಹಾಗೂ ಕಟ್ಟಡಗಳ ಮಾಹಿತಿ ಸಂಗ್ರಹಿಸಿ ದುರಸ್ಥಿಗೆ ತುತರ್ು ಕ್ರಮವಹಿಸಬೇಕು. ಶಿಥಿಲಗೊಂಡಿರುವ ಶಾಲಾ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸಬಾರದು. ಕಟ್ಟಡ ದುರಸ್ಥಿ ಕಾರ್ಯ ಪೂರ್ಣವಾಗುವವರೆ ಬದಲಿ ಕಟ್ಟಡದಲ್ಲಿ ತರಗತಿಗಳನ್ನು ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕರಿಗೆ ಸೂಚನೆ ನೀಡಿದರು.
ಶಾಸಕ ನೆಹರು ಓಲೇಕಾರ ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆ ಹಾಗೂ ಅತಿವೃಷ್ಠಿಯಿಂದ ಐದುಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಕೆಲವೆಡೆ ಜಾನುವಾರುಗಳ ಜೀವಹಾನಿಯಾಗಿದೆ. ಕುಟುಂಬಗಳು ನಿರಾಶ್ರಿತವಾಗಿವೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕೂಡಲೇ ಎಲ್ಲ ಪಿಡಿಓಗಳನ್ನು ಸಂಪಕರ್ಿಸಿ ಹಾನಿಯ ವಿವರವನ್ನು ಪಡೆಯಬೇಕು. ತುತರ್ಾಗಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಕ್ಷೇತ್ರ ಜಿಲ್ಲಾ ಪಂಚಾಯತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಹ ಹಾಗೂ ಅತಿವೃಷ್ಠಿಯಿಂದ ಜನರ ಸಂಕಷ್ಟಗಳು ಹಾಗೂ ಹಾನಿಯ ವಿವರವನ್ನು ಸಭೆಯಲ್ಲಿ ತಿಳಿಸಿ ಜನರ ಸಂಕಷ್ಟಗಳಿಗೆ ತುತರ್ಾಗಿ ಸ್ಪಂದಿಸುವಂತೆ ಮನವಿ ಮಾಡಿಕೊಂಡರು.
ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ, ಉಪಕಾರ್ಯದಶರ್ಿ ಜಿ.ಗೋವಿಂದಸ್ವಾಮಿ ಉಪಸ್ಥಿತರಿದ್ದರು.