ಕೆ.ಎಲ್‌.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ

K.L.E. Institution College of Education

ಕೆ.ಎಲ್‌.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ,

ಬೆಳಗಾವಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು    ಬೆಳಗಾವಿ 24 :  ದಿನಾಂಕ:  24.01.2025 ರಂದು ಕೆ.ಎಲ್‌.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಣೆಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ವ್ಹಿ.ಪಿ. ಕುರಿ ಅವರು, ಹಾಗೂ ಕಾರ್ಯಕ್ರಮದ ಸಂಯೋಜಕರಾಗಿ ಸಹ ಪ್ರಾಧ್ಯಾಪಕರಾದ ಶ್ರೀಮತಿ ಭುವನೇಶ್ವರಿ ಪಾಟೀಲ ಅವರು ಭಾಗವಹಿಸಿದ್ದರು.  

   ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲ ಉಪನ್ಯಾಸಕರು ಹಾಗೂ ಎಲ್ಲ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ “ಪೋಸ್ಟರ್ ಮೇಕಿಂಗ್‌” ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.