ಕೊಪ್ಪಳ ಮಾವು ಮೇಳಕ್ಕೆ ತೆರೆ: ರೂ. 2.60 ಕೋಟಿಗೂ ಹೆಚ್ಚಿನ ವಹಿವಾಟು

Koppal Mango Fair opens: Turnover exceeds Rs. 2.60 crore

ಸಮಾರೋಪ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಭಾಗಿ: ರೈತರಿಗೆ ಪ್ರಮಾಣ ಪತ್ರ ವಿತರಣೆ 

ಕೊಪ್ಪಳ  27:  ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 14 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸೋಮವಾರ ತೆರೆ ದೊರೆತಿದ್ದು, ಮೇಳದಲ್ಲಿ ರೂ. 2.60 ಕೋಟಿಗೂ ಹೆಚ್ಚಿನ ವಹಿವಾಟಾಗಿದೆ. 

ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯು ಮಾವು ಬೆಳೆಯುವ ರೈತರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ 9ನೇ ವರ್ಷದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 13 ರಿಂದ ಮೇ 26ರ ವರೆಗೆ 14 ದಿನಗಳ ಕಾಲ ತೋಟಗಾರಿಕೆ ಉಪನಿರ್ದೇಶಕರ ಕಛೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. 

ರೈತರಿಗೆ ಪ್ರಮಾಣ ಪತ್ರ: ಮಾವು ಪ್ರದರ್ಶನ ಮತ್ತು ಮಾರಾಟ ಮೇಳದ ಸಮಾರೋಪ ಸಮಾರಂಭದಲ್ಲಿ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರು ಭಾಗಿಯಾಗಿ, ಮೇಳದಲ್ಲಿ ಭಾಗವಹಿದ್ದ ರೈತರಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಿದರು. 

ಈ ಸಂದರ್ಭದಲ್ಲಿ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ, ಹಿರಿಯ ಸಹಾಯಕ ನಿರ್ದೇಶಕ ಜೆ.ಶಂಕ್ರ​‍್ಪ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. 

9ನೇ ವರ್ಷದ ಕೊಪ್ಪಳ ಮಾವು ಮೇಳ ವರದಿ: 2025ರ ಮಾವು ಮೇಳವು ಹಿಂದೆಂದಿಗಿಂತಲೂ ಹೆಚ್ಚಿನ ಗ್ರಾಹಕರನ್ನು ಆಕರ್ಷಿಸಿ 280 ಟನ್ ಗೂ ಹೆಚ್ಚಿನ ವಿವಿಧ ತಳಿಯ ಮಾವುಗಳನ್ನು ರೈತರು ಮಾರಾಟ ಮಾಡಿ ರೂ.2.60 ಕೋಟಿಗೂ ಹೆಚ್ಚಿನ ವಹಿವಾಟು ಈ ಮೇಳದಲ್ಲಿ ದಾಖಲಾಗಿದೆ. ಮಳೆಯ ನಡುವೆಯೆ ಗ್ರಾಹಕರು ಭಾಗವಹಿಸಿ ಅತ್ಯಂತ ಖುಷಿಯಿಂದ ಮೇಳದಲ್ಲಿ ಪ್ರತಿ ವರ್ಷವೂ ಗುಣಮಟ್ಟದ ಮತ್ತು ಯೋಗ್ಯ ಬೆಲೆಯ ಮಾವು ಖರೀದಿಸಿ ಎಲ್ಲಾ ಹಣ್ಣುಗಳ ರುಚಿ ಸವಿಯುವುದು, ನಮಗೆ ಅತ್ಯಂತ ಖುಷಿ ಮತ್ತು ನೆಮ್ಮದಿಯನ್ನು ತರುತ್ತದೆ ಹಾಗೂ ಇಂತಹ ಮೇಳಗಳು ಪ್ರತಿ ವರ್ಷವೂ ಹೀಗೆ ಮುಂದುವರೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. 

ಈ ಮೇಳದಲ್ಲಿ ರೈತರಿಗಾಗಿ ಮಾವಿನ ಕುರಿತು ವಿವಿಧ ತಾಂತ್ರಿಕ ಮಾಹಿತಿಗಳನ್ನು ನೀಡಲಾಯಿತು ಹಾಗೂ ನೈಸರ್ಗಿಕವಾಗಿ ಮಾವು ಮಾಗಿಸುವ ಕುರಿತು ಎನ್ ರೈಪ್ (ಜಟಿಡಿಠಿಜ) ಎಂಬ ನೈಸರ್ಗಿಕ ಇಥರೆಲ್ ಪಂಚ್ ಹೋಲ್ ಪಾಕೆಟ್‌ಗಳನ್ನು ಪರಿಚಯಿಸಿ ಹಣ್ಣುಗಳನ್ನು ಮಾಗಿಸುವ ವಿಧಾನವನ್ನು ಸಹ ಇಲಾಖೆಯಿಂದ ರೈತರಿಗೆ ತಿಳಿಸಿಕೊಡಲಾಯಿತು ಹಾಗೂ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಮಾವಿನ ಹಣ್ಣುಗಳನ್ನು ಮಾಗಿಸುವ ಘಟಕವನ್ನು (ಈಡಿಣಣ ಖಠಿಜಟಿಟಿರ ಅಚಿಟಛಜಡಿ) ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (ಖಏಗಿಙ) ಸಹಾಯಧನದಲ್ಲಿ ನೀಡುವ ಕುರಿತು ತಿಳಿಸಲಾಯಿತು ಹಾಗೂ ಪ್ರಾತ್ಯಾಕ್ಷಿಕೆಯನ್ನು ಸಹ ರೈತರಿಗೆ ಏರಿ​‍್ಡಸಲಾಗಿತ್ತು. 

ಈ ಮೇಳವು ಹಿಂದಿನ ಎಲ್ಲಾ ಮೇಳಕ್ಕಿಂತ ಯಶಸ್ವಿಯಾಗಿದ್ದು ಹೆಚ್ಚಿನ ಹಣ್ಣುಗಳ ಮಾರಾಟವಾಗಿದೆ. ಈ ಮೇಳದಲ್ಲಿ ಭಾಗವಹಿಸಲು 100 ಕ್ಕೂಈ ಹೆಚ್ಚಿನ ರೈತರು ಪೈಪೋಟಿಯಿಂದ ತಾವು ಬೆಳೆದ ಹಣ್ಣುಗಳನ್ನು ಮೇಳದಲ್ಲಿ ಮಾರಾಟ ಮಾಡಲು ತಮ್ಮ ಹೆಸರನ್ನು ನೊಂದಾಯಿಸಿ ಮೇಳದಲ್ಲಿ ಭಾಗವಹಿಸಿ ಮಾವು ಮಾರಾಟ ಮಾಡಲು ರೈತರು ಹಾಗೂ ರೈತ ಉತ್ಪಾದಕ ಸಂಘಗಳು, ಹಾಪ್ ಕಾಮ್ಸ್‌, ಇಲಾಖಾ ತೋಟಗಾರಿಕೆ ಕ್ಷೇತ್ರಗಳಿಗೆ ಗಳಿಗೆ ತಮ್ಮ ಉತ್ಪನವನ್ನು ಮಾರಾಟ ಮಾಡಲು 30 ಕ್ಕೂ ಹೆಚ್ಚಿನ ಮಾರಾಟ ಮಳಿಗೆಳನ್ನು ಉಚಿತವಾಗಿ ತೆರೆಯಲಾಗಿತ್ತು ಹಾಗೂ ಇನ್ನೂ ಹೆಚ್ಚಿನ ರೈತರಿಗೆ ಆವರಣದಲ್ಲಿ ಮಾರಾಟ ಮಾಡಲು ಅನುಕೂಲ ಮಾಡಿಕೊಡಲಾಯಿತು. ಮಾವು ಮಾರಾಟ ಮೇಳದಲ್ಲಿ ಜಿಲ್ಲೆಯ ಏಳು ತಾಲ್ಲೂಕುಗಳ ಮಾವು ಬೆಳೆಗಾರರು ಭಾಗವಹಿಸಿದ್ದರು. ರೈತರು ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿದ 15 ಕ್ಕೂ ಹೆಚ್ಚಿನ ವಿವಿಧ ಮಾವಿನ ತಳಿಯ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಿರುತ್ತಾರೆ. ಮೇಳದಲ್ಲಿ ಕೇಸರ್ ಮತ್ತು ದಶಹರಿ ತಳಿಯ ಮಾವು ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು 200 ಟನ್‌ಗೂ ಹೆಚ್ಚು ಮಾರಾಟವಾಗಿದೆ. ಅದೇ ರೀತಿ ಬೆನೆಶಾನ್, ಕೇಸರ್, ದಶಹರಿ, ರಸಪುರಿ, ಸ್ವರ್ಣರೇಖಾ, ಇಮಾಮ ಪಸಂಧ, ಆಪೋಸು, ಮಲ್ಲಿಕಾ, ತೋತಾಪೂರಿ, ಸಕ್ಕರೆ ಗುಟ್ಟಿ, ಖಾದರ್, ಪುನಾಸ್ ಮತ್ತು ಉಪ್ಪಿನಕಾಯಿ ತಳಿ ಸೇರಿದಂತೆ, ವಿವಿಧ ತಳಿಯ ಮಾವಿನ ಹಣ್ಣುಗಳು 80 ಟನ್‌ಗೂ ಹೆಚ್ಚು ಮಾರಾಟವಾಗಿದೆ. ಆಮ್ಲಟ್ ಮತ್ತು ಪುನಾಸ್ ಉಪ್ಪಿನಕಾಯಿ ಮಾವಿನ ಕಾಯಿಗೆ ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬಂದು ಮಾರಾಟವಾಗಿದೆ. ಮಾವಿನ ಹಣ್ಣುಗಳನ್ನು ನೈಸರ್ಗಿಕವಾಗಿ ಮತ್ತು ವೈಜ್ಞಾನಿಕವಾಗಿ ಮಾಗಿಸಿ ಗ್ರಾಹಕರಿಗೆ ಕೈಗೆಟುವ ದರದಲ್ಲಿ ರೈತರು ನೇರವಾಗಿ ಮಾರಾಟ ಮಾಡಿರುತ್ತಾರೆ. ಇದರಿಂದಾಗಿ ಗ್ರಾಹಕರಿಗೂ ಯೋಗ್ಯ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಹಣ್ಣುಗಳು ಲಭಿಸಿದ್ದು ಅವರೂ ಕೂಡಾ ಈ ಮೇಳದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

ಮೇಳದಲ್ಲಿ ಜಿಲ್ಲೆಯ ಮತ್ತು ಹೊರ ಜಿಲ್ಲೆಯ ಸರಕಾರಿ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿದ್ದು, ಹೆಚ್ಚಿನ ಹಣ್ಣು ಖರೀದಿಸಿದಲ್ಲದೇ ನಾವು ಉತ್ತಮ ಗುಣಮಟ್ಟದ ಹಣ್ಣುಗಳನ್ನು ಖರೀದಿಸಲು ಹುಬ್ಬಳ್ಳಿ, ಹೊಸಪೇಟೆ ನಗರಗಳಿಗೆ ಹೋಗಬೇಕಾಗಿತ್ತು. ಆದರೆ ಕೊಪ್ಪಳದಲ್ಲಿಯೇ ಮೇಳವನ್ನು ಏರಿ​‍್ಡಸಿರುವುದರಿಂದ ವಿವಿಧ ತಳಿಯ ಉತ್ತಮ ಹಣ್ಣುಗಳು ಕೊಪ್ಪಳದಲ್ಲಿಯೇ ಲಭ್ಯವಾಗಿದ್ದು, ಕುಟುಂಬ ಸಮೇತ ಬಂದು ಖರೀದಿಸಲು ಅನುಕೂಲವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಮಾರುಕಟ್ಟೆಯಲ್ಲಿ ಕೃತಕವಾಗಿ ಮಾಗಿಸಿದ ಹಣ್ಣುಗಳಿಗಿಂತ ಇಲ್ಲಿ ದೊರೆಯುವ ಹಣ್ಣುಗಳ ರುಚಿಕರವಾಗಿದೆ ಹಾಗೂ ಆರೋಗ್ಯ ದೃಷ್ಟಿಯಿಂದ ಉತ್ತಮ. ತೋಟಗಾರಿಕೆ ಇಲಾಖೆಯು ಗ್ರಾಹಕ ಹಾಗೂ ಮಾವು ಬೆಳೆಗಾರರನ್ನು ನೇರವಾಗಿ ಸಂರ​‍್ಕಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಎಂದು ಶ್ಲಾಘಿಸಿದ್ದಾರೆ ಹಾಗೂ ವಿವಿಧ ಗುಣಮಟ್ಟದ ಉಪ್ಪಿನಕಾಯಿಗಳನ್ನು ಸಹ ಮೇಳದಲ್ಲಿ ಮಾರಾಟಕ್ಕೆ ಇಡಲಾಗಿತ್ತು ಹಾಗೂ 5 ಟನ್‌ಗೂ ಹೆಚ್ಚಿನ ಉಪ್ಪಿನಕಾಯಿಗಳನ್ನು ಸಹ ಮಾರಾಟ ಮಾಡಲಾಯಿತು. 

ಮಿಯಾಜಾಕಿ ಮಾವಿನ ಹಣ್ಣಿನ ಹವಾ: ಈ ಭಾರಿಯು ಮೇಳದಲ್ಲಿ "ಮಿಯಾಜಾಕಿ ಮಾವಿನ ಹಣ್ಣಿನ ಹವಾ" ಸೃಷ್ಟಿಸಿತ್ತು ಹಾಗೂ ಮಾವು ಮೇಳ-2025ರ ಪ್ರದರ್ಶನದಲ್ಲಿ 120 ಕ್ಕೂ ಹೆಚ್ಚಿನ ವಿವಿಧ ದೇಶಿ ಮತ್ತು ವಿದೇಶಿ ತಳಿ ಹಣ್ಣುಗಳ ಪ್ರದರ್ಶನವನ್ನು ಏರಿ​‍್ಡಸಲಾಗಿತ್ತು. ಅವುಗಳಲ್ಲಿ "ಜಗತ್ತಿನ ದುಬಾರಿ ಮಾವು ಮಿಯಾಜಾಕಿ" ಎಂಬ ಜಪಾನಿನ ಮಾವಿನ ತಳಿಯ ಹಣ್ಣನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಸದರಿ ಮಿಯಾಜಾಕಿ ಮಾವು ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಲ್ಲಿ ಮಾಧ್ಯಮಗಳ ಮುಖಾಂತರ ಸಾಕಷ್ಟು ಪ್ರಚಾರವನ್ನು ಪಡೆದು ಪ್ರತಿಯೊಬ್ಬರ ಬಾಯಲ್ಲಿ ಮಿಯಾಜಾಕಿ ಮಾವಿನ ತಳಿಯ ಬಗ್ಗೆ ಮಾತನಾಡುವಂತಾಗಿತ್ತು ಹಾಗೂ ಮಿಯಾಜಾಕಿ ಮಾವನ್ನು ನೋಡಲು ಸಾರ್ವಜನಿಕರು ಹಾಗೂ ರೈತರು ಹಾಗೂ ಹೊರ ಜಿಲ್ಲೆಗಳಿಂದ ಸಾಕಷ್ಟು ಜನರು ತಂಡೋಪ ತಂಡವಾಗಿ ಬಂದು ಕುತೂಹಲದಿಂದ ವೀಕ್ಷೀಸಿ ಚರ್ಚಿಸುತ್ತಿದ್ದಿದ್ದು ಸಾಮಾನ್ಯವಾಗಿತ್ತು. ಈ ಮೇಳದಲ್ಲಿ ರೈತರಿಗೆ ಮಿಯಾಜಾಕಿ ಗಿಡಗಳನ್ನು ಮಾರಾಟಕ್ಕೆ ಇಡಲಾಗಿತ್ತು. 500 ಕ್ಕೂ ಹೆಚ್ಚಿನ ಮಿಯಾಜಾಕಿ ಹಣ್ಣಿನ ಗಿಡಗಳು ಮಾರಾಟವಾದವು. ಹಾಗೂ ಸಾಕಷ್ಟು ರೈತರು ತಮ್ಮ ತೋಟದಲ್ಲಿ ಮಿಯಾಜಾಕಿ ಮಾವಿನ ಹಣ್ಣಿನ ತಳಿ ಗಿಡಗಳ ಬೆಳೆಯುವ ಬಗ್ಗೆ ಇಲಾಖೆಯೊಂದಿಗೆ ಚರ್ಚಿಸಿದರು. ಈ ಮೇಳದಲ್ಲಿ ಜಗತ್ತಿನ ದುಬಾರಿ ಮಾವು ಮಿಯಾಜಾಕಿ ತಳಿಯು ರಾಜ್ಯಾದ್ಯಾಂತ ಸುದ್ದಿ ಮಾಡಿತು. 

ಈ ಮೇಳದಲ್ಲಿ ಬೆಂಗಳೂರು, ದಾವಣಗೆರೆ, ಹಾವೇರಿ, ತುಮಕೂರು, ಚಿತ್ರದುರ್ಗಾ, ರಾಯಚೂರು, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಹಾಗೂ ವಿವಿಧ ಹೊರ ಜಿಲ್ಲೆಯ ಮಾವು ಬೆಳೆಯುವ ರೈತರು ಸಹ ಭಾಗವಹಿಸಿ ಹಣ್ಣು ಮಾರಾಟ ಮಾಡುವ ಬಗ್ಗೆ ಹಾಗೂ ನೈಸರ್ಗಿಕವಾಗಿ ಹಣ್ಣು ಮಾಗಿಸುವ ಬಗ್ಗೆ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿಯನ್ನು ಪಡೆದಿಕೊಂಡಿರುತ್ತಾರೆ. 

ಕೇಸರ್ ಮಾವಿನ ಬ್ರಾಂಡ್ ಬಾಕ್ಸ್‌ಗೆ ಬೇಡಿಕೆ: ಈ ಮೇಳದಲ್ಲಿ ಕೊಪ್ಪಳ ಕೇಸರ್ ತಳಿಯ ಮಾವಿಗೆ ಹೆಚ್ಚಿನ ಬೇಡಿಕೆ ಬಂದು 2.50 ಕೆ.ಜಿ. ತೂಕದ "ಕೊಪ್ಪಳ ಕೇಸರ್" ಎಂಬ ಬ್ರಾಂಡ್ ಬಾಕ್ಸ್‌ ಗೆ ಹೆಚ್ಚಿನ ಬೇಡಿಕೆ ಬಂದು 10000 ಕ್ಕೂ ಹೆಚ್ಚಿನ ಬಾಕ್ಸ್‌ಗಳನ್ನು ಬೆಂಗಳೂರು ಮತ್ತು ದೆಹಲಿ, ಹುಬ್ಬಳ್ಳಿ, ಹೈದರಬಾದ್, ಮಂಗಳೂರು ಹಾಗೂ ವಿವಿಧ ನಗರಗಳಿಗೆ ರೈತರು ಪ್ಯಾಕ್ ಮಾಡಿ 50 ಟನ್‌ಗೂ ಹೆಚ್ಚಿನ ಕೇಸರ್ ಮಾವಿನ ಹಣ್ಣುಗಳನ್ನು ಬಾಕ್ಸ್‌ ಮುಖಾಂತರ ಮಾರಾಟ ಮಾಡಿರುತ್ತಾರೆ. ಸದರಿ ಬಾಕ್ಸ್‌ಗಳನ್ನು ತೋಟಗಾರಿಕೆ ಇಲಾಖೆಯಿಂದ ಖಏಗಿಙ ಯೋಜನೆಯಡಿ ರೈತರಿಗೆ ಸಹಾಯಧನ ಮುಖಾಂತರ ಪೂರೈಸಲಾಗಿತ್ತು. 

ಈ ಬಾರಿ ಹೆಚ್ಚಿನ ವಿವಿಧ ತಳಿ ಮಾವಿನ ಹಣ್ಣುಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅಂದರೆ ಬೇರೆ ಬೇರೆ ಜಿಲ್ಲೆಗಳಿಗೆ ಸರಕು ವಾಹನಗಳ ಮೂಲಕ, ಬಸ್‌ಗಳ ಮೂಲಕ ದೂರದೂರಿನ ಜಿಲ್ಲೆಗಳಿಗೂ ತಲುಪಿಸಿ ಮಾರಾಟ ಆಗಿವೆ. ಕೊಪ್ಪಳ ಕೇಸರ ಎಂದೆ ಪ್ರಸಿದ್ದವಾದ ಈ ತಳಿಗೆ ಕಲ್ಯಾಣ ಕರ್ನಾಟಕ ಅಷ್ಟೇ ಅಲ್ಲದೇ ರಾಜ್ಯದ ಉದ್ದಗಲಕ್ಕೂ ಬೇಡಿಕೆ ಬಂದಿದ್ದು ನೂರಾರು ಕೆಜಿ ಹಣ್ಣುಗಳನ್ನು ಹೊರ ರಾಜ್ಯದ ಗ್ರಾಹಕರಿಗೂ ತಲುಪಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 14 ದಿನಗಳ ಕಾಲ ನಡೆದ ಮಾವು ಮೇಳದಲ್ಲಿ ಅಂದಾಜು 40 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದು ರೂ.2.60 ಕೋಟಿಗೂ ಹೆಚ್ಚಿನ ವಹಿವಾಟು ನಡೆದಿದ್ದು ಈ ಮೇಳವು ಹಿಂದಿನ ಎಲ್ಲಾ ಮೇಳಕ್ಕಿಂತಲೂ ಅತ್ಯಂತ ಯಶಸ್ವಿಯಾಗಿದ್ದು, ಹೆಚ್ಚಿನ ಗ್ರಾಹಕರು ಭಾಗವಹಿಸಿ ಹೆಚ್ಚು ಮಾವುಗಳನ್ನು ಖರೀದಿಸಿ ದಾಖಲೆ ನಿರ್ಮಿಸಿರುತ್ತಾರೆ. 

ಹೆಚ್ಚಿನ ರೈತರು ಮಾವು ಮೇಳದಿಂದ ಉತ್ತೇಜಿತರಾಗಿದ್ದು, ಮೇಳದಲ್ಲಿ ಮಾವು ಬೆಳೆಯ ಕುರಿತು ತಾಂತ್ರಿಕ ಮಾಹಿತಿ ಹಾಗೂ ರಫ್ತು ಮಾರುಕಟ್ಟೆ, ಸಂಸ್ಕರಣೆ ಕುರಿತು ಮಾಹಿತಿ ಪಡೆದಿದ್ದು ಮಾವು ಬೆಳೆಯಲು ಆಸಕ್ತಿ ತೋರಿದ್ದು ಮುಂದಿನ ದಿನಗಳಲ್ಲಿ ಕೇಸರ್ ತಳಿಯನ್ನು ಅಧಿಕ ಸಾಂದ್ರತೆ ಬೇಸಾಯ ಪದ್ಧತಿಯಲ್ಲಿ 2000 ಕ್ಕೂ ಹೆಚ್ಚಿನ ಎಕರೆ ಪ್ರದೇಶಾಭಿವೃದ್ಧಿ ಕೈಗೊಳ್ಳುವ ಗುರಿ ಹೊಂದಲಾಗಿದೆ. ಹೀಗಾಗಿ ಕೇಸರ ತಳಿಗೆ ಅತೀ ಹೆಚ್ಚಿನ ಬೇಡಿಕೆ ಬಂದಿದ್ದು, ಮುಂಬರುವ ವರ್ಷಗಳಲ್ಲಿ ನೂತನ ತಂತ್ರಜ್ಞಾನ ಗಳಾದ, ಅಧಿಕ ಸಾಂದ್ರ ಪದ್ಧತಿ, ಹನಿ ನೀರಾವರಿ, ರಸಾವರಿ ಇತ್ಯಾದಿಗಳ ಮೂಲಕ ಎರಡು ಸಾವಿರ ಎಕರೆಗೂ ಹೆಚ್ಚಿನ ಪ್ರದೇಶ ವಿಸ್ತರಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ರೈತರೂ ಕೂಡ ಕೇಸರ ತಳಿ ಮಾವು ಬೆಳೆಯಲು ಅತ್ಯಂತ ಆಸಕ್ತಿ ವಹಿಸಿದ್ದು, ಇಲಾಖೆ ಗುರಿ ಮುಟ್ಟಲು ಸಹಕಾರ ನೀಡಲು ಮುಂದಾಗಿದ್ದಾರೆ. ಒಟ್ಟಾರೆ ಮಾವು ಮೇಳದಿಂದ ರೈತರಿಗೆ ಕೃಷಿಯಲ್ಲಿ ಹೊಸ ಭರವಸೆ ಮೂಡಿದೆ. ಗ್ರಾಹಕರಿಗೆ ಕೇಸರ ತುಂಬ ಇಷ್ಟವಾಗಿದೆ. ಜೊತೆಗೆ ರೈತರು ಜಗತ್ತಿನ ದುಬಾರಿ ಮಾವು ಆದ "ಮಿಯಾಜಾಕಿ" ತಳಿಯ ಮಾವಿನ ಸಸಿಗಳನ್ನು ವಿವಿಧ ನರ್ಸರಿಗಳಿಂದ ತಂದು ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಗತ್ತಿನ ದುಬಾರಿ ಮಾವು ಆದ ಮಿಯಾಜಾಕಿ ಮುಂದಿನ ವರ್ಷದ ಕೊಪ್ಪಳ ಮಾವುಮೇಳದಲ್ಲಿ ಮಾರಾಟಕ್ಕೆ ಲಭ್ಯವಾಗುವ ಸಾಧ್ಯತೆ ಇರುತ್ತದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿರುತ್ತಾರೆ.