ಬೆಳಗಾವಿ 30: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಬೇಕೆಂದು ಕಾಂಗ್ರೆಸ್ ಧುರೀಣ ಗಜು ಧರನಾಯಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಎಆಯ್‌ಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಗ್ರಹಿಸಿದ್ದಾರೆ.
ಕಳೆದ ಎರಡು ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದೆ. ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಸಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹುದ್ದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೀಡಬೇಕೆಂದು ಧರನಾಯಿಕ ಆಗ್ರಹಿಸಿದ್ದಾರೆ. ಈ ಹಿಂದೆ ನಿಗಮ ಮಂಡಳಿ ಆಯ್ಕೆಯಲ್ಲಿಯೂ ಈ ವರ್ಗಕ್ಕೆ ಸ್ಥಾನ ಸಿಕ್ಕಿಲ್ಲ ಎಂದು ತಿಳಿಸಿದ ಅವರು ಜಿಲ್ಲಾ ಅಧ್ಯಕ್ಷರ ಹುದ್ದೆಗಾದರೂ ಪರಿಗಣಿಸಬೇಕೆಂದು ಆಗ್ರಹಿಸಿದ್ದಾರೆ.