ಸಾಮಾನ್ಯ ರೋಗಗಳು ಅವುಗಳ ಚಿಕಿತ್ಸೆ ಕುರಿತು ನೇರ ಪೋನ್‌-ಇನ್ ಕಾರ್ಯಕ್ರಮ

Live phone-in program on common diseases and their treatment

ಬೆಳಗಾವಿ 11: ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ ದಿ. 12ನೆ ಏಪ್ರಿಲ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ವಿಶ್ವ ಆರೋಗ್ಯ ದಿನ ಅಂಗವಾಗಿ ಸಾಮಾನ್ಯ ರೋಗಗಳು ಮತ್ತು ಅವುಗಳ ಚಿಕಿತ್ಸೆ ಕುರಿತು ನೇರ ಪೋನ್‌-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.  

ಬೆಳಗಾವಿಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಾಧವ ಪ್ರಭು ಇವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ ಎಸ್‌. ಜಲಾಲಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.