ಬ್ಯಾಡಗಿ24: ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಬಸನಕಟ್ಟೆ ಕೆರೆಯ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದ್ದಾರೆ.
ರಾಜ್ಯ ಭ್ರಷ್ಟಾಚಾರ ವಿರೋಧಿ ಜನ ಆಂದೋಲನ ನ್ಯಾಸ ಘಟಕ ಹಾಗೂ ಪರಿಸರ ಸ್ನೇಹಿ ಬಳಗದ ಸದಸ್ಯರು, ಬಸನಕಟ್ಟೆ ಕೆರೆಯಲ್ಲಿ ಗಿಡ ಕಂಟೆಗಳು ಬೆಳೆದು ಉಂಟಾಗಿರುವ ಗಲೀಜು ಹಾಗೂ ದುವರ್ಾಸನೆಯಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ ಕೆರೆಯ ದುರಸ್ತಿಗೆ ಮಾಡಿದ ಮನವಿಗೆ ಸ್ಪಂದಿಸಿದ ಶಾಸಕರು ಬಸನಕಟ್ಟೆ ಕೆರೆಯನ್ನು ವೀಕ್ಷಣೆ ಮಾಡಿ ಪುರಸಭೆಯ ಅನುದಾನದಲ್ಲಿ ಕೆರೆಯ ಸುಧಾರಣೆಗೆ ಕ್ರಮ ವಹಿಸುವುದಾಗಿ ತಿಳಿಸಿದರು.
ಕೆರೆ ಪರಿಶೀಲನೆಯ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಬಸವರಾಜ ಛತ್ರದ, ಸುಭಾಸ ಮಾಳಗಿ, ವಿನಯ ಹಿರೇಮಠ, ತಾಬಿಜೆಪಿ ಅಧ್ಯಕ್ಷ ಸುರೇಶ ಆಸಾದಿ, ಪರಿಸರ ಸ್ನೇಹಿ ಬಳಗದ ಸದಸ್ಯರಾದ ಮಾಜಿ ಸೈನಿಕ ಮಲ್ಲೇಶಪ್ಪ ಚಿಕ್ಕಣ್ಣನವರ, ರಾಜು ಹುಲ್ಲತ್ತಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.