ಕೋಲ್ಕತಾ, ಆಗಸ್ಟ್ 11 ಚಲಿಸುವ ಮೆಟ್ರೋ ರೈಲಿನ ಕೆಳಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಪಶ್ಚಿಮ ಬಂಗಾಳದ ಡಮ್ ಡಮ್ ಮೆಟ್ರೋ ರೈಲು ನಿಲ್ದಾಣದಲ್ಲಿ ಶನಿವಾರ ನಡೆದಿದೆ. ವ್ಯಕ್ತಿ ರೈಲು ಹಳಿಗಳ ಮೇಲೆ ಹಾರಿದ ಕೂಡಲೇ ರೈಲನ್ನು ನಿಲ್ಲಿಸಿ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಷ್ಟರೊಳಗೆ ಆತ ಮೃತಪಟ್ಟಿದ್ದ ಎಂದು ಮೆಟ್ರೋ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕಾಶ್ ಶಾ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇದ್ರಾಣಿ ಮುಖರ್ಜಿ ಹೇಳಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತ್ಮಹತ್ಯೆಯಿಂದಾಗಿ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುವಂತಾಯಿತು.