ತಾಳಿಕೋಟಿ 24: ಆಪರೇಷನ್ ಸಿಂಧೂರ ಕಾರ್ಯಾಚರಣೆ ಸ್ಮರಣೀಯವಾಗಿರಿಸಿ ದೇಶದ ಸೈನಿಕರ ಮನೋಬಲ ಹೆಚ್ಚಿಸಲು ಮೇ 26ರಂದು ಪಟ್ಟಣದಲ್ಲಿ ನಡೆಯಲಿರುವ ತಿರಂಗಾ ಯಾತ್ರೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ದೇಶಭಕ್ತರು ಸಹಕರಿಸಬೇಕು ಎಂದು ಚೈತನ್ಯ ಸ್ನೇಹಿತರ ಬಳಗದ ಅಧ್ಯಕ್ಷ ಮಾನಸಿಂಗ್ ಕೊಕಟನೂರ ಮನವಿ ಮಾಡಿಕೊಂಡಿದ್ದಾರೆ.
ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮೇ 26ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3 ಗಂಟೆಗೆ ತಿರಂಗಾ ಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ ಇದರಲ್ಲಿ ಎಲ್ಲರೂ ವಿಶೇಷವಾಗಿ ನಮ್ಮ ಯುವ ಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಂತರ ವಿಠಲ ಮಂದಿರ ಹತ್ತಿರ ನಡೆಯುವ ಬಹಿರಂಗ ಸಭೆಯ ವೇದಿಕೆಯಲ್ಲಿ ದೇಶ ಸೇವೆಯಲ್ಲಿರುವ ಹಾಗೂ ಯುದ್ಧ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮ ರಾಗಿರುವ ಸೈನಿಕರ ಕುಟುಂಬದ ಸದಸ್ಯರಿಗೆ ಸನ್ಮಾನಿಸಿ ಗೌರವಿಸುವ ವಿಶೇಷ ಕಾರ್ಯಕ್ರಮ ನಡೆಯಲಿದೆ, ನಮ್ಮ ಸೈನಿಕರು ದೇಶದ ಹೆಮ್ಮೆಯ ಪ್ರತೀಕವಾಗಿದ್ದಾರೆ ಅವರ ತ್ಯಾಗ ವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕಾರ್ಯಕ್ರಮ ಜಾತ್ಯತೀತ ಪಕ್ಷಾತೀತವಾಗಿ ನಡೆಯಲಿದ್ದು ಇದರಲ್ಲಿ ಎಲ್ಲ ದೇಶಭಕ್ತರು ಭಾಗವಹಿಸಬೇಕಾಗಿದೆ ಎಂದ ಅವರು ಕಾರ್ಯಕ್ರಮದ ಯಶಸ್ವಿಗೆ ಚೈತನ್ಯ ಸ್ನೇಹಿತರ ಬಳಗದ ಎಲ್ಲ ಪದಾಧಿಕಾರಿಗಳು ಶಕ್ತಿ ಮೀರಿ ಪ್ರಯತ್ನಿಸಲಿದ್ದಾರೆ ಎಂದು ತಿಳಿಸಿದರು.