ನಗರದ ಆನಂದ ಮಹಲಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ : ಅಭಿವೃದ್ದಿ ಕಾರ್ಯಗಳ ಕುರಿತು ಪರೀಶೀಲನೆ

Minister Krishnabhairegowda visit to Ananda Mahal in the city: review of development works

ವಿಜಯಪುರ 12:  ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.  

ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್‌ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು,  ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ  ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.  

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.