ವಾಡಿಕೆಗೂ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು

Monsoon arrives in Kerala earlier than usual

ಬೆಂಗಳೂರು 24: ಶನಿವಾರ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ಪ್ರವೇಶಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಭಾರತೀಯ ಹವಾಮಾನ ಇಲಾಖೆ ಇದೇ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಅದಕ್ಕೂ ಮೂರು ದಿನ ಮೊದಲೇ ಮುಂಗಾರು ಪ್ರವೇಶವಾಗಿದೆ ಎಂದು ಇಲಾಖೆ ಇಂದು ತಿಳಿಸಿದೆ.

ಸಾಮಾನ್ಯವಾಗಿ ಜೂನ್ 1 ರಂದು ಮುಂಗಾರು ಕೇರಳ ಕರಾವಳಿ ಪ್ರವೇಶಿಸುತ್ತದೆ.

2009 ರಲ್ಲಿ ಮುಂಗಾರು ಅವಧಿಗೂ ಮುನ್ನವೇ ಕೇರಳ ಕರಾವಳಿ ಪ್ರವೇಶಿಸಿದ್ದನ್ನು ಬಿಟ್ಟರೆ ಇದೇ ವರ್ಷ ಅವಧಿಗೂ ಮುನ್ನ ಮುಂಗಾರು ಆಗಮಿಸುತ್ತಿದೆ ಎಂದು ಐಎಂಡಿ ಹೇಳಿದೆ.

ಈ ವರ್ಷ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆ ಸುರಿಸಲಿದೆ ಎಂದು ಐಎಂಡಿ ಈಗಾಗಲೇ ಮುನ್ಸೂಚನೆ ನೀಡಿದೆ.