ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ರವರ 134ನೇ ಜಯಂತಿ ಪ್ರಯುಕ್ತ ಪುರಸಭೆ

Municipality on the occasion of the 134th birth anniversary of sculptor Dr. B.R. Ambedkar

ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ರವರ 134ನೇ ಜಯಂತಿ ಪ್ರಯುಕ್ತ ಪುರಸಭೆ

ಮುಂಡರಗಿ 14 : ಏ.14ರಂದು ಮುಂಡರಗಿ ಪುರಸಭೆ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ರವರ 134ನೇ ಜಯಂತಿ ಪ್ರಯುಕ್ತ ಪುರಸಭೆಯ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮೂಹಿಕ ಪೂಜೆ ಸಲ್ಲಿಸುವ ಮೂಲಕ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. 

ಈ ವೇಳೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಸ್ಥಾಯಿ ಸಮೀತಿ ಚೆರ್ಮನ್ ರಫೀಕ್ ಮುಲ್ಲಾ ಹಾಗೂ ಸರ್ವ ಸದಸ್ಯರು ಮತ್ತು ಪುರಸಭೆ ಮುಖ್ಯಾಧಿಕಾರಿ ಶಂಕರ್ ಹುಲ್ಲಮ್ಮನವರ ಸೇರಿದಂತೆ ವಿವಿಧ ಸಿಬ್ಬಂದಿ ವರ್ಗದವರು ಹಾಗೂ ಸಮಾಜದ ಗುರು-ಹಿರಿಯರು ಪಾಲ್ಗೊಂಡಿದ್ದರು.